ಬಂಧನ (ಸಾಂದರ್ಭಿಕ ಚಿತ್ರ)
ಬೆಂಗಳೂರು: ಕೆ.ಆರ್.ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಹೊರ ರಾಜ್ಯದ ಇಬ್ಬರು ಆರೋಪಿಗಳನ್ನು ಸಿಸಿಬಿಯ ಮಹಿಳಾ ರಕ್ಷಣಾ ದಳದ ಪೊಲೀಸರು ಬಂಧಿಸಿದ್ದಾರೆ.
ಪಶ್ಚಿಮ ಬಂಗಾಳದ ದೇಬ್‍ಕುಮಾರ್ ದಾಸ್ ಹಾಗೂ ಅಸ್ಸಾಂನ ಅಜೀತ್‍ಕುಮಾರ್ ಝಾ ಬಂಧಿತರು.
ಕೆ.ಆರ್.ಪುರದ ಬಸವನಪುರ ಚೆಲ್ಲಪತಿರಾಜು ಲೇಔಟ್‍ನ ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು. ಉದ್ಯೋಗ ಆಮಿಷವೊಡ್ಡಿ ಹೊರ ರಾಜ್ಯದ ಯುವತಿಯರನ್ನು ಬೆಂಗಳೂರಿಗೆ ಕರೆತಂದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು.
ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿ, ಮನೆಯಲ್ಲಿದ್ದ ಇಬ್ಬರು ಯುವತಿಯರನ್ನು ರಕ್ಷಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.