ADVERTISEMENT

ವೇಶ್ಯಾವಾಟಿಕೆ: ಯುವತಿಯರ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2020, 22:56 IST
Last Updated 21 ಫೆಬ್ರುವರಿ 2020, 22:56 IST

ಬೆಂಗಳೂರು: ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹೊರರಾಜ್ಯದಿಂದ ಯುವತಿಯರನ್ನು ಕರೆತಂದು ಕೆ.ಆರ್‌. ಪುರದ ಹೂಡಿ ಗ್ರಾಮದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಐವರು ಯುವತಿಯರನ್ನು ರಕ್ಷಿಸಲಾಗಿದೆ.

ಆಂಧ್ರದ ಚಿತ್ತೂರಿನ ಶೇಖ್‌ ಮೊಹಮ್ಮದ್‌ ಗೌಸ್‌ (33) ಮತ್ತು ಚನ್ನಪಟ್ಟಣದ ಜಿನೇನಹಳ್ಳಿಯ ಹರೀಶ್‌ (33) ಬಂಧಿತರು. ಬಂಧಿತರಿಂದ ₹ 3 ಸಾವಿರ ನಗದು, 5 ಮೊಬೈಲ್‌, ಸ್ವೈಪಿಂಗ್‌ ಮೆಷಿನ್‌, ಕಂಪ್ಯೂಟರ್‌ ವಶಪಡಿಸಿಕೊಳ್ಳಲಾಗಿದೆ. ದಂಧೆಯಲ್ಲಿ ತೊಡಗಿಸಿಕೊಂಡಿದ್ದ ಇಬ್ಬರು ಹುಡುಗಿಯರು ತಲೆಮರೆಸಿಕೊಂಡಿದ್ದಾರೆ.ಕೆ.ಆರ್‌.ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಲಬ್‌ ಮೇಲೆ ದಾಳಿ: ಕಮಲಾನಗರ ಒಂದನೇ ಮುಖ್ಯರಸ್ತೆಯಲ್ಲಿರುವ ಕೆಂಪೇಗೌಡ ರಿಕ್ರಿಯೇಷನ್‌ ಕ್ಲಬ್‌ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು 12 ಮಂದಿಯನ್ನು ಬಂಧಿಸಿ, ₹ 42 ಸಾವಿರ ನಗದು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ಹಲವು ದಿನಗಳಿಂದ ಕ್ಲಬ್‌ನಲ್ಲಿ ಜೂಜಾಟದಲ್ಲಿ ತೊಡಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.