ADVERTISEMENT

ಸಿಲಿಂಡರ್ ಹೊತ್ತು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 15 ಜೂನ್ 2021, 21:28 IST
Last Updated 15 ಜೂನ್ 2021, 21:28 IST
ರಾಜಾನುಕುಂಟೆಯಲ್ಲಿ ಕಾಂಗ್ರೆಸ್‌ ಮುಖಂಡರು ಪ್ರತಿಭಟನೆ ನಡೆಸಿದರು. ಮುಖಂಡರಾದ ಚೊಕ್ಕನಹಳ್ಳಿ ವೆಂಕಟೇಶ್, ಲಾವಣ್ಯ, ಗ್ರಾಮ ಪಂಚಾಯಿತಿ ಸದಸ್ಯರಾದ ನರಸಿಂಹಮೂರ್ತಿ, ಹೆಸರಘಟ್ಟ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ನಾರಾಯಣ್ಣಪ್ಪ ಹಾಗೂ ಇತರರು ಇದ್ದರು
ರಾಜಾನುಕುಂಟೆಯಲ್ಲಿ ಕಾಂಗ್ರೆಸ್‌ ಮುಖಂಡರು ಪ್ರತಿಭಟನೆ ನಡೆಸಿದರು. ಮುಖಂಡರಾದ ಚೊಕ್ಕನಹಳ್ಳಿ ವೆಂಕಟೇಶ್, ಲಾವಣ್ಯ, ಗ್ರಾಮ ಪಂಚಾಯಿತಿ ಸದಸ್ಯರಾದ ನರಸಿಂಹಮೂರ್ತಿ, ಹೆಸರಘಟ್ಟ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ನಾರಾಯಣ್ಣಪ್ಪ ಹಾಗೂ ಇತರರು ಇದ್ದರು   

ಹೆಸರಘಟ್ಟ: ಅಡುಗೆ ಅನಿಲ ದರ ಏರಿಕೆ ವಿರೋಧಿಸಿ ರಾಜಾನುಕುಂಟೆ ಕಾಂಗ್ರೆಸ್‌ ಮುಖಂಡರು ಗ್ಯಾಸ್‌ ಸಿಲಿಂಡರ್‌ಗಳನ್ನು ತಲೆಯ ಮೇಲೆ ಹೊತ್ತು ಮಂಗಳವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಚೊಕ್ಕನಹಳ್ಳಿ ವೆಂಕಟೇಶ್,‘ಕೋವಿಡ್‌ನಿಂದ ಜನ ಉದ್ಯೋಗವಿಲ್ಲದೆ ಪರದಾಡುತ್ತಾರೆ. ಈ ವೇಳೆ ಬೆಲೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಜನರ ನೆಮ್ಮದಿಯನ್ನು ಕಸಿಯುತ್ತಿದೆ’ ಎಂದು ದೂರಿದರು.

ಸಿಂಗನಾಯಕನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆ ಲಾವಣ್ಯ ಮಾತನಾಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.