ADVERTISEMENT

ಕೋವಿಡ್‌ 19: ಸ್ಮಶಾನ ನಿರ್ಮಾಣಕ್ಕೆ ವಿರೋಧ

​ಪ್ರಜಾವಾಣಿ ವಾರ್ತೆ
Published 3 ಜುಲೈ 2020, 22:09 IST
Last Updated 3 ಜುಲೈ 2020, 22:09 IST

ರಾಜರಾಜೇಶ್ವರಿನಗರ: ಕೋವಿಡ್-19 ನಿಂದ ಮೃತಪಟ್ಟವರ ಅಂತ್ಯಕ್ರಿಯೆಯನ್ನುತಿಪ್ಪಗೊಂಡನಹಳ್ಳಿ ಸಮೀಪದ ಕೆಂಪಗೊಂಡನಹಳ್ಳಿ ಬಳಿ ಮಾಡಲು ಸರ್ಕಾರ ಮುಂದಾಗಿರುವ ಕ್ರಮವನ್ನು ಖಂಡಿಸಿ ಗ್ರಾಮಸ್ಥರುಪ್ರತಿಭಟನೆ ನಡೆಸಿದರು.

‘ಬೆಂಗಳೂರು ಮಹಾನಗರದ ನಾಗರಿಕರಿಗೆ ಕುಡಿಯುವ ನೀರು ಸರಬರಾಜು ಮಾಡುವ ಐತಿಹಾಸಿಕ ತಿಪ್ಪಗೊಂಡನಹಳ್ಳಿ ಕೆರೆ ಸಮೀಪವೇ ಐದು ಎಕರೆ ಪ್ರದೇಶದಲ್ಲಿ ಸ್ಮಶಾನ ನಿರ್ಮಿಸಲು ಯೋಜಿಸಲಾಗಿದೆ. ಇದನ್ನು ನಾವು ಖಂಡಿಸುತ್ತೇವೆ’ ಎಂದು‍ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ಹಿರಿಯ ವಕೀಲ ರಾಮಕೃಷ್ಣಯ್ಯ ಮಾತನಾಡಿ, ‘ಈ ಜಾಗದಲ್ಲಿ ಬಡ ರೈತರು ಹಲವು ದಶಕಗಳಿಂದ ಉಳುಮೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಪಕ್ಕದಲ್ಲಿಯೇ ಕಾಲೇಜು ಇದೆ. ಕೋವಿಡ್‍ನಿಂದ ಮೃತಪಟ್ಟವರ ಅಂತ್ಯಕ್ರಿಯೆಗಾಗಿ ಈ ಜಮೀನು ಕಿತ್ತುಕೊಳ್ಳಬೇಡಿ’ ಎಂದು ಒತ್ತಾಯಿಸಿದರು.

ADVERTISEMENT

ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಸದಸ್ಯ ಡಿ.ಹನುಮಂತಯ್ಯ, ಗ್ರಾಮ ಪಂಚಾಯ್ತಿ ಸದಸ್ಯರಾದ ಶಿವರುದ್ರೇಶ್, ರಾಮಚಂದ್ರೇಗೌಡ ಮಾತನಾಡಿದರು. ತಿಪ್ಪಗೊಂಡನಹಳ್ಳಿ, ಕೆಂಪಗೊಂಡನಹಳ್ಳಿ, ಎಲ್ಲಪ್ಪನಪಾಳ್ಯ ಗ್ರಾಮಸ್ಥರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.