ADVERTISEMENT

‘ಸಿಎಎ’ ವಿರೋಧಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2020, 19:57 IST
Last Updated 8 ಫೆಬ್ರುವರಿ 2020, 19:57 IST

ಬೆಂಗಳೂರು: ಪೌರತ್ವ (ತಿದ್ದು‍ಪಡಿ) ಕಾಯ್ದೆ (ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ವಿರೋಧಿಸಿ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.

ಬನ್ನೇರುಘಟ್ಟ ರಸ್ತೆಯ ಡೈರಿ ವೃತ್ತದಲ್ಲಿ ಸೇರಿದ್ದ ಪ್ರತಿಭಟನಾಕಾರರು, ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು. ಸಿಎಎ ವಿರುದ್ಧ ಘೋಷಣಾ ಫಲಕಗಳನ್ನು ಪ್ರದರ್ಶಿಸಿದರು.

‘ದೇಶದ ಜನರ ವಿರೋಧಿಯಾದ ಕಾಯ್ದೆಯನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು. ಅಲ್ಲಿಯವರೆಗೂ ಹೋರಾಟ ನಿರಂತರ’ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.