ADVERTISEMENT

ಕನ್ನಡಿಗರಿಗೆ ಅವಮಾನ ಆರೋಪ: ಸೋನು ನಿಗಮ್ ವಿರುದ್ಧ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 3 ಮೇ 2025, 23:38 IST
Last Updated 3 ಮೇ 2025, 23:38 IST
   

ಬೆಂಗಳೂರು: ಬಾಲಿವುಡ್ ಗಾಯಕ ಸೋನು ನಿಗಮ್ ಅವರು ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಕನ್ನಡ ಸಂಘಟನೆ ಮುಖಂಡ ರೂಪೇಶ್ ರಾಜಣ್ಣ ಹಾಗೂ ಇತರೆ ಕಾರ್ಯಕರ್ತರು ಶನಿವಾರ ಕನ್ನಡ ಚಲನ ಚಿತ್ರ ವಾಣಿಜ್ಯ ಮಂಡಳಿ ಎದುರು ಪ್ರತಿಭಟನೆ ನಡೆಸಿದರು.

ಬಳಿಕ ವಾಣಿಜ್ಯ ಮಂಡಳಿಯ ಮುಖ್ಯಸ್ಥರನ್ನು ಭೇಟಿಯಾದ ಕಾರ್ಯಕರ್ತರು, ಸೋನು ನಿಗಮ್ ಅವರನ್ನು ಕನ್ನಡ ಚಿತ್ರರಂಗ ನಿಷೇಧಿಸಬೇಕು ಎಂದು ಒತ್ತಾಯಿಸಿದರು. ಜತೆಗೆ ಈ ಹಿಂದೆ ಉತ್ತರ ಭಾರತ ಸೋನು ನಿಗಮ್ ಅವರನ್ನು ನಿರ್ಲಕ್ಷ್ಯಿಸಿದಾಗ, ಕನ್ನಡಿಗರು ಪ್ರೀತಿ ಕೊಟ್ಟಿದ್ದಾರೆ. ಆದರೂ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಕೆ ಮಾಡಿರುವುದು ಸರಿಯಲ್ಲ. ಆದ್ದರಿಂದ ಅವರನ್ನು ಕನ್ನಡ ಸಿನಿಮಾಗಳಿಂದ ನಿಷೇಧಿಸಬೇಕು ಎಂದು ಆಗ್ರಹಿಸಿದರು.

ಸೋನು ನಿಗಮ್ ಅವರ ಭಾವಚಿತ್ರಕ್ಕೆ ಮಸಿ ಬಳಿಯುವ ಮೂಲಕ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ರಾಜಾಜಿನಗರದಲ್ಲಿ ಪಕ್ಷದ ಕಚೇರಿಯ ಮುಂಭಾಗ ಸೋನು ನಿಗಮ್ ವಿರುದ್ಧ ಪ್ರತಿಭಟನೆ ನಡೆಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.