ADVERTISEMENT

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2019, 20:18 IST
Last Updated 14 ಡಿಸೆಂಬರ್ 2019, 20:18 IST
ಮುಸ್ಲಿಮ್‌ ಮುಖಂಡರು ಪ್ರತಿಭಟನೆ ನಡೆಸಿದರು.
ಮುಸ್ಲಿಮ್‌ ಮುಖಂಡರು ಪ್ರತಿಭಟನೆ ನಡೆಸಿದರು.   

ಕೆ.ಆರ್.ಪುರ: ‘ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯು ಸಂವಿಧಾನ ವಿರೋಧಿ ಯಾಗಿದ್ದು, ಕೂಡಲೇ ಅದನ್ನು ಹಿಂಪಡೆಯಬೇಕು’ ಎಂದು ಆಗ್ರಹಿಸಿ ಕೆ.ಆರ್.ಪುರದ ಮುಸ್ಲಿಮರು ವಿಜಿನಾ ಪುರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನಕಾರರು ಪ್ರಧಾನಿ ಮೋದಿ, ಗೃಹಸಚಿವ ಅಮಿತ್ ಶಾ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಜಾಮಿಯಾ ಮಸೀದಿ ಅಧ್ಯಕ್ಷ ಎಂ.ಸಯ್ಯದ್ ಅಯೂಬ್ ಮಾತನಾಡಿ, ‘ವಿದೇಶಗಳಿಂದ ಬಂದು ಅಕ್ರಮವಾಗಿ ನೆಲೆಸಿರುವ ಹಿಂದೂ, ಸಿಖ್, ಬೌದ್ಧ, ಜೈನ್ ಹಾಗೂ ಪಾರ್ಸಿಗಳಿಗೆ ಭಾರತದ ಪೌರತ್ವ ನೀಡಲು ಈ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಆದರೆ, ಮುಸ್ಲಿಮರನ್ನು ಉದ್ದೇಶ ಪೂರ್ವಕವಾಗಿ ಕೈ ಬಿಡಲಾಗಿದೆ. ಧರ್ಮದ ಆಧಾರ ದಲ್ಲಿ ದೇಶವನ್ನು ವಿಭಜಿಸಲು ಮುಂದಾ ಗುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರದ ನಡವಳಿಕೆ ಖಂಡನೀಯ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.