
ಕೆ.ಆರ್.ಪುರ: ಅಪಾರ್ಟ್‌ಮೆಂಟ್‌ನಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ ಮಾಡಿದಕ್ಕೆ ಕೆಲಸದಿಂದ ತೆಗೆದು ಹಾಕುವುದಾಗಿ ಸಿಬ್ಬಂದಿಗೆ ನೋಟಿಸ್ ಜಾರಿ ಮಾಡಿರುವುದನ್ನು ಖಂಡಿಸಿ ಭಟ್ಟರಹಳ್ಳಿ ಸಮೀಪದ ಜೀನಾ ಶಾಲೋಮ್ ಅಪಾರ್ಟ್‌ಮೆಂಟ್ ಎದುರು ಯುವ ಕರ್ನಾಟಕ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಅಪಾರ್ಟ್‌ಮೆಂಟ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಅಪಾರ್ಟ್‌ಮೆಂಟ್ ಸಿಬ್ಬಂದಿಗೆ ನೋಟಿಸ್ ಜಾರಿ ಮಾಡಿರುವುದರಿಂದ ಕರ್ನಾಟಕ ವೇದಿಕೆಯ ಕಾರ್ಯಕರ್ತರು ಪ್ರತಿಭಟಿಸಿದರು.
ಯುವ ಕರ್ನಾಟಕ ವೇದಿಕೆ ಸಂಘಟನಾ ಕಾರ್ಯದರ್ಶಿ ಆರ್.ಮಂಜುನಾಥ್ ಮಾತನಾಡಿ, ‘ಕರ್ನಾಟಕದಲ್ಲಿ ಕನ್ನಡಿಗರು ಮೇಲೆ ನಿರಂತರ ದೌರ್ಜನ್ಯ ನಡೆಸುತ್ತಿದ್ದಾರೆ. ಮಿತಿ ಮೀರುತ್ತಿರುವ ಉತ್ತರ ಭಾರತೀಯರ ದಬ್ಬಾಳಿಕೆ, ದರ್ಪ ಕೊನೆ ಯಾವಾಗ’ ಎಂದು ಪ್ರಶ್ನಿಸಿದರು.
ಜೀನಾ ಶಾಲೋಮ್ ಅಪಾರ್ಟ್‌ಮೆಂಟ್‌ನಲ್ಲಿ ಕ್ಯಾಪ್ರಿಯೋ ಸಂಸ್ಥೆಯ ವತಿಯಿಂದ ನವೆಂಬರ್ 30 ರಾಜ್ಯೋತ್ಸವ ಆಚರಿಸಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ, 21 ಕನ್ನಡಿಗರನ್ನು ಕೆಲಸದಿಂದ ತೆಗೆದು ಹಾಕಲಾಗುವುದು ಎಂದು ಒಡಿಶಾ ಮೂಲದ ಪ್ರಧಾನ ಕಾರ್ಯದರ್ಶಿ ಸೌಮ್ಯಜಿತ್ ಹಾಗೂ ಸಹ ಖಜಾಂಚಿ ಸಾಕ್ಷಿ ಎಂಬುವವರು ನೋಟಿಸ್ ಜಾರಿ ಮಾಡಿದ್ದಾರೆ ಎಂದು ದೂರಿದರು.
ವೇದಿಕೆಯ ಸದಸ್ಯರಾದ ಕೃಷ್ಣಮೂರ್ತಿ , ಓಂ ಮಹೇಶ್, ಚೋಲಿಸ್, ಸುನೀಲ್, ಚಿಕ್ಕಣ್ಣ , ರಾಜೇಶ್, ಶಂಕರ್, ವೆಂಕಿ ಮತ್ತು ಗಂಗಾಧರ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.