ADVERTISEMENT

ಫ್ರೀಡಂ ಪಾರ್ಕ್‌ನಲ್ಲಿ ಮಾತ್ರವೇ ಪ್ರತಿಭಟನೆ; ಹೈಕೋರ್ಟ್‌ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2022, 20:39 IST
Last Updated 1 ಆಗಸ್ಟ್ 2022, 20:39 IST
   

ಬೆಂಗಳೂರು: ‘ಫ್ರೀಡಂ ಪಾರ್ಕ್‌ (ಸ್ವಾತಂತ್ರ್ಯ ಉದ್ಯಾನ) ಹೊರತುಪಡಿಸಿ ನಗರದ ಯಾವುದೇ ಭಾಗದಲ್ಲೂ ರಾಜಕೀಯ ಅಥವಾ ರಾಜಕಿಯೇತರ ಸಂಘಟನೆಗಳು ಮೆರವಣಿಗೆ, ಪ್ರತಿಭಟನೆ, ಬಹಿರಂಗ ಸಭೆ ನಡೆಸಲು ಅನುಮತಿ ನೀಡದಂತೆ ನ್ಯಾಯಾಲಯ ಹೊರಡಿಸಿರುವ ಆದೇಶ ಮತ್ತು ಈ ಸಂಬಂಧದ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು‘ ಎಂದು ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಈ ಕುರಿತಂತೆ ಹೈಕೋರ್ಟ್ ದಾಖಲಿಸಿಕೊಂಡಿದ್ದ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ಹೆಚ್ಚುವರಿ ವಕೀಲ ವಿಜಯಕುಮಾರ್ ಎ.ಪಾಟೀಲ್, ‘ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ 27 ಎಫ್‌ಐಆರ್ ದಾಖಲಿಸಲಾಗಿದೆ’ ಎಂದು ವಿವರಿಸಿ, ದಾಖಲೆ ಸಲ್ಲಿಸಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ‘2021ರಲ್ಲಿ ಅನುಷ್ಠಾನಗೊಳಿಸಿರುವ ಪ್ರತಿಭಟನೆಗಳು, ಪ್ರದರ್ಶನಗಳು ಮತ್ತು ಪ್ರತಿಭಟನಾ ಮೆರವಣಿಗೆಗಳ (ಬೆಂಗಳೂರು ನಗರ) ಪರವಾನಗಿ ಮತ್ತು ನಿಯಂತ್ರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು’ ಎಂದು ಸರ್ಕಾರಕ್ಕೆ ನಿರ್ದೇಶಿಸಿ ಅರ್ಜಿ ವಿಲೇವಾರಿ ಮಾಡಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.