ADVERTISEMENT

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಪ್ರತಿಭಟನೆ ಮುಂದುವರಿಕೆ

​ಪ್ರಜಾವಾಣಿ ವಾರ್ತೆ
Published 24 ಜನವರಿ 2023, 22:34 IST
Last Updated 24 ಜನವರಿ 2023, 22:34 IST
ಪ್ರತಿಭಟನೆ ನಡೆಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ರಸ್ತೆಯಲ್ಲಿ ಕುಳಿತು ಊಟ ಮಾಡಿದರು        – ಪ್ರಜಾವಾಣಿ ಚಿತ್ರ
ಪ್ರತಿಭಟನೆ ನಡೆಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ರಸ್ತೆಯಲ್ಲಿ ಕುಳಿತು ಊಟ ಮಾಡಿದರು        – ಪ್ರಜಾವಾಣಿ ಚಿತ್ರ   

ಬೆಂಗಳೂರು:ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ನಡೆಸುತ್ತಿರುವ ಪ್ರತಿಭಟನೆ ಮಂಗಳ ವಾರ ಎರಡನೇ ದಿನ ಪೂರೈಸಿತು.

‘ಅಂಗನವಾಡಿ ಕಾರ್ಯಕರ್ತೆಯರನ್ನು ಸರ್ಕಾರಿ ಶಿಕ್ಷಕಿಯರೆಂದು ಪರಿಗಣಿಸಬೇಕು. ಅನ್ನದ ಕೇಂದ್ರಗಳಾಗಿರುವ ಅಂಗನವಾಡಿಗಳನ್ನು ಅಕ್ಷರ ಕೇಂದ್ರಗಳಾಗಿ ಮಾರ್ಪಡಿಸಬೇಕು. ಗ್ರ್ಯಾಚ್ಯುಟಿ ಪಾವತಿಸಬೇಕು’ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೋಮವಾರದಿಂದ (ಜ. 23) ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭವಾಗಿದೆ.

ರಾಜ್ಯ ಹಲವು ಜಿಲ್ಲೆಗಳಿಂದ ನಗರಕ್ಕೆ ಬಂದಿರುವ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಉದ್ಯಾನದಲ್ಲಿ ಹಗಲು–ರಾತ್ರಿ ಕುಳಿತು ಪ್ರತಿಭಟನೆ ಮುಂದುವರಿಸಿ ದ್ದಾರೆ. ಉದ್ಯಾನದಲ್ಲೇ ಊಟ, ನಿದ್ದೆ ಮಾಡುತ್ತಿದ್ದಾರೆ. ಮಂಗಳವಾರವೂ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನಕಾರರು ಪಾಲ್ಗೊಂಡಿದ್ದರು.

ADVERTISEMENT

‘ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಬಗ್ಗೆ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರುತ್ತಿದೆ. ಬೇಡಿಕೆ ಈಡೇರಿಕೆಗೆ ಹಲವು ಬಾರಿ ಹೋರಾಟ ನಡೆಸಿದರೂ ಸ್ಪಂದಿಸು ತ್ತಿಲ್ಲ. ಬೇಡಿಕೆ ಈಡೇರಿಸುವ ಬಗ್ಗೆ ಲಿಖಿತ ಭರವಸೆ ಸಿಗುವವರೆಗೂ ಉದ್ಯಾನ ಬಿಟ್ಟು ಹೋಗುವುದಿಲ್ಲ’ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷೆ ಎಸ್. ವರಲಕ್ಷ್ಮಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.