ADVERTISEMENT

ಬಿಸಿಯೂಟ ತಯಾರಕರ ಪ್ರತಿಭಟನೆ ವಾಪಸ್

​ಪ್ರಜಾವಾಣಿ ವಾರ್ತೆ
Published 22 ಜನವರಿ 2020, 21:59 IST
Last Updated 22 ಜನವರಿ 2020, 21:59 IST

ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಒಕ್ಕೂಟದ ನೇತೃತ್ವದಲ್ಲಿ ಎರಡು ದಿನಗಳಿಂದ ನಡೆಸುತ್ತಿದ್ದ ಪ್ರತಿಭಟನೆಯನ್ನು ಬಿಸಿಯೂಟ ತಯಾರಕರು ಬುಧವಾರ ಹಿಂಪಡೆದಿದ್ದಾರೆ.

ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಮಂಗಳವಾರ ಸಂಜೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಭೇಟಿ ನೀಡಿ, ಒಕ್ಕೂಟದ ಮುಖಂಡರ ಜತೆ ಮಾತುಕತೆ ನಡೆಸಿದರು. ಇದೇ 28ಕ್ಕೆ ಸಭೆ ನಡೆಸಿ ಸಮಸ್ಯೆ ಬಗೆಹರಿಸುವ ಬಗ್ಗೆ ಚರ್ಚಿಸುವುದಾಗಿ ಅವರು ಭರವಸೆ ನೀಡಿದರು. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆದಿರುವುದಾಗಿ ಪ್ರತಿಭಟನಾ ನಿರತರು ತಿಳಿಸಿದರು.

ರಾಜ್ಯ ವಿವಿಧ ಜಿಲ್ಲೆಗಳಿಂದ ಬಂದಿದ್ದ ಪ್ರತಿಭಟನಾಕಾರರು ಮಂಗಳವಾರ ರಾತ್ರಿ ಸ್ವಾತಂತ್ರ್ಯ ಉದ್ಯಾನದಲ್ಲಿಯೇ ವಾಸ್ತವ್ಯ ಹೂಡಿ, ಬುಧವಾರ ಬೆಳಿಗ್ಗೆ ತಮ್ಮ ಊರುಗಳಿಗೆ ಮರಳಿದರು ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಚಂದ್ರು ಅವರಗೆರೆ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.