ಬೆಂಗಳೂರು: ‘ನಗರದ ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚಲು ಬಿಬಿಎಂಪಿ ಒಂದು ವಾರದ ಒಳಗೆ ಕ್ರಮ ಕೈಗೊಳ್ಳಬೇಕು. ಇಲ್ಲದೇ ಇದ್ದರೆ ನಾವೇ ಗುಂಡಿಮುಚ್ಚಿ ಪ್ರತಿಭಟನೆ ಆರಂಭಿಸುತ್ತೇವೆ’ ಎಂದು ‘ಆರೋಹಣ’ ಫೌಂಡೇಷನ್ ಸಂಸ್ಥೆಯ ಸದಸ್ಯರು ತಿಳಿಸಿದ್ದಾರೆ.
ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
‘ಗುಂಡಿ ಮುಚ್ಚುವಂತೆ ನಾವು ಬಿಬಿಎಂಪಿಗೆ ಎರಡು ಬಾರಿ ಮನವಿ ಸಲ್ಲಿಸಿದ್ದೇವೆ. ಯಾವುದೇ ಸ್ಪಂದನೆ ದೊರೆಯದ ಕಾರಣ ಸಾಂಕೇತಿಕವಾಗಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಇನ್ನು ಒಂದು ವಾರದಲ್ಲಿ ಬಿಬಿಎಂಪಿ ಕ್ರಮ ಕೈಗೊಳ್ಳಬೇಕು’ ಎಂದು ‘ಆರೋಹಣ’ ಫೌಂಡೇಷನ್ ಅಧ್ಯಕ್ಷ ಮಹಮ್ಮದ್ ರಾಯಿದ್ ಝೈನ್ ಗಡುವು ನೀಡಿದರು.
ವೈಟ್‌ಫೀಲ್ಡ್, ಬನ್ನೇರುಘಟ್ಟ ರಸ್ತೆ ಸೇರಿದಂತೆ ನಗರದ ಅನೇಕ ಕಡೆಗಳಲ್ಲಿ ಗುಂಡಿಗಳು ಬಿದ್ದಿವೆ. ಹೊಂಡಗಳಿಂದಾಗಿ ಅಪಘಾತಗಳು ಹೆಚ್ಚಿವೆ ಎಂದು ತಿಳಿಸಿದರು.
‘ಆರೋಹಣ’ ಫೌಂಡೇಷನ್‌ನ ಶ್ರೀಹರಿ ಶ್ರೀನಿವಾಸ್, ಇಮಾನ್ ಸಯಿದ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.