ADVERTISEMENT

ಪೌರಕಾರ್ಮಿಕರ ಧರಣಿ 13ರಂದು

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2020, 0:33 IST
Last Updated 8 ಆಗಸ್ಟ್ 2020, 0:33 IST

ಬೆಂಗಳೂರು: ಪೌರಕಾರ್ಮಿಕರನ್ನು ಕಾಯಂ ಮಾಡುವಂತೆ ಒತ್ತಾಯಿಸಿ ರಾಜ್ಯ ನಗರಪಾಲಿಕೆ, ನಗರಸಭೆ, ಪೌರ
ಕಾರ್ಮಿಕರ ಮಹಾಸಂಘದ ನೇತೃತ್ವದಲ್ಲಿ ಇದೇ 13ರಂದು ಧರಣಿ ನಡೆಸಲು ಪೌರಕಾರ್ಮಿಕರು ನಿರ್ಧರಿಸಿದ್ದಾರೆ.

'ಇತ್ತೀಚೆಗೆ ಮಾರ್ಷಲ್‍ಗಳಾಗಿ ಸೇರಿದವರಿಗೆ ಹೆಚ್ಚು ವೇತನ ನೀಡುತ್ತಿದ್ದಾರೆ. ಆದರೆ, 10ಕ್ಕೂ ಹೆಚ್ಚು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರ ಕೆಲಸ ಕಾಯಂ ಮಾಡಿಲ್ಲ, ವೇತನವನ್ನೂ ಹೆಚ್ಚಿಸಿಲ್ಲ. ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಪಾಲಿಕೆ ಆಯುಕ್ತರಿಗೆ ಮನವಿ ಮಾಡಿದ್ದೇವೆ. ಆದರೆ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ' ಎಂದು ಸಂಘದ ಬೆಂಗಳೂರು ನಗರ ಅಧ್ಯಕ್ಷ ಪಿ.ಎನ್.ಮುತ್ಯಾಲಪ್ಪ ತಿಳಿಸಿದರು.

‘ಪೌರಕಾರ್ಮಿಕರನ್ನು ಕಾಯಂ ಮಾಡುವಂತೆ ಒತ್ತಾಯಿಸಿ ನಗರದ ಎಲ್ಲ ವಾರ್ಡ್‍ಗಳಲ್ಲಿ ಧರಣಿ ಹಮ್ಮಿಕೊಳ್ಳಲು ನಿರ್ಧರಿಸಿದ್ದೇವೆ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.