ADVERTISEMENT

ರಾಜಭವನದ ಮುಂದೆ ಪ್ರತಿಭಟನೆ: ಕಾಂಗ್ರೆಸ್ ಕಾರ್ಯಕರ್ತರು ವಶಕ್ಕೆ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2024, 16:06 IST
Last Updated 17 ಆಗಸ್ಟ್ 2024, 16:06 IST
   

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅವ್ಯವಹಾರಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ವಿರುದ್ಧ ವಿಚಾರಣೆಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮವನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ರಾಜಭವನದ ಎದುರು ಶನಿವಾರ ಪ್ರತಿಭಟಿಸಿದರು.

ಕಪ್ಪುಪಟ್ಟಿ ಧರಿಸಿದ್ದ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ರಾಜ್ಯಪಾಲರ ಭೇಟಿಗೆ ಅನುಮತಿಗೆ ಪಟ್ಟು ಹಿಡಿದರು. ಬಳಿಕ ಪೊಲೀಸರು, ಮುಖಂಡರಾದ ಕುಶಾಲ್, ನವೀನ್ ಸೇರಿದಂತೆ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಿನಾಕಾರಣ ಹಗೆ ಸಾಧಿಸಲಾಗುತ್ತಿದೆ. ರೋಲ್ ಕಾಲ್ ಮಾಡುವವರಿಗೆ, ಕಳ್ಳರಿಗೆ ಒಳಗೆ ಪ್ರವೇಶವಿದೆ, ನಮಗಿಲ್ಲವೇ?’ ಎಂದು ಕಾರ್ಯಕರ್ತರು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT