ADVERTISEMENT

‘ಪ್ರತಿಭಟನೆ ಪರವಾನಗಿ ನಿಯಮ ಮತ್ತಷ್ಟು ಕಠಿಣ’

ಪೊಲೀಸ್ ಅಧಿಕಾರಿಗಳಿಗೆ ಗೃಹ ಸಚಿವ ಬೊಮ್ಮಾಯಿ ಸೂಚನೆ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2020, 10:29 IST
Last Updated 24 ಫೆಬ್ರುವರಿ 2020, 10:29 IST
ಗೃಹಸಚಿವ ಬಸವರಾಜ ಬೊಮ್ಮಾಯಿ
ಗೃಹಸಚಿವ ಬಸವರಾಜ ಬೊಮ್ಮಾಯಿ   

ಬೆಂಗಳೂರು: ‘ಸಮಾಜದ ಶಾಂತಿ ಕದಡುವ ಹಾಗೂ ‘ದೇಶದ್ರೋಹ’ ಕೃತ್ಯ ಎಸಗುತ್ತಿರುವ ಪ್ರಕರಣಗಳು ಹೆಚ್ಚಾಗಿದ್ದು, ಪ್ರತಿಭಟನೆಗೆ ಅನುಮತಿ ನೀಡುವ ನಿಯಮಗಳನ್ನು ಮತ್ತಷ್ಟು ಕಠಿಣಗೊಳಿಸಿ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಭಾನುವಾರ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು, ‘ವಿದ್ಯಾರ್ಥಿಗಳನ್ನು ಮುಂದಿಟ್ಟುಕೊಂಡು ಕೆಲ ಸಂಘಟನೆಗಳು ಹಾಗೂ ಶಿಕ್ಷಣ ಸಂಸ್ಥೆಗಳು ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿವೆ. ಇಂಥ ಅಪಾಯಕಾರಿ ಬೆಳವಣಿಗೆ ಬಗ್ಗೆ ನಿಗಾ ವಹಿಸಬೇಕು’ ಎಂದರು.

‘ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರುದ್ಧ ಸೇರಿದಂತೆ ರಾಜ್ಯದಲ್ಲಿ ಯಾವುದೇ ಪ್ರತಿಭಟನೆ ನಡೆದರೂ ಅದರ ಸಂಪೂರ್ಣ ಮಾಹಿತಿಯನ್ನು ಪೊಲೀಸರು ಕಲೆಹಾಕಬೇಕು. ಪ್ರತಿಭಟನೆಯ ಆಯೋಜಕರು, ಭಾಷಣಕಾರರು ಹಾಗೂ ಅದರಲ್ಲಿ ಭಾಗವಹಿಸುವ ಪ್ರತಿಭಟನಕಾರರ ವಿವರವನ್ನು ಸಂಗ್ರಹಿಸಬೇಕು. ಅಹಿತಕರ ಘಟನೆಗಳು ನಡೆಯುವ ಸಾಧ್ಯತೆ ಕಂಡುಬಂದರೆ ಕಾನೂನಿನಡಿ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.

ADVERTISEMENT

ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.