ಮೆಟ್ರೊ
ಪ‍್ರಜಾವಾಣಿ ಚಿತ್ರ
ಬೆಂಗಳೂರು: ನಮ್ಮ ಮೆಟ್ರೊದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದ ಪಾಸ್ ಒದಗಿಸಬೇಕು ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಯುವ ಘಟಕದ ಅಧ್ಯಕ್ಷ ಲೋಹಿತ್ ಹನುಮಾಪುರ ಆಗ್ರಹಿಸಿದರು.
ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಮ್ಮ ಮೆಟ್ರೊ ಈಗಾಗಲೇ ದುಬಾರಿಯಾಗಿದೆ. ನಗರದಲ್ಲಿ ವ್ಯಾಸಂಗ ಮಾಡುತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನುಕೂಲ ಆಗುವ ಉದ್ದೇಶದಿಂದ ನಮ್ಮ ಮೆಟ್ರೊದಲ್ಲಿ ರಿಯಾಯಿತಿ ದರದಲ್ಲಿ ಪಾಸ್‌ಗಳನ್ನು ವಿತರಿಸಬೇಕು. ನಗರದಲ್ಲಿ ಸಂಚಾರ ದಟ್ಟಣೆಯ ನಡುವೆ ವಿದ್ಯಾರ್ಥಿಗಳು ನಿತ್ಯ ಬಿಎಂಟಿಸಿಯಲ್ಲಿಯೇ ಸಂಚರಿಸುತ್ತಿದ್ದು, ಶಾಲಾ–ಕಾಲೇಜುಗಳಿಗೆ ತಲುಪಲು ತಡವಾಗುತ್ತಿದೆ’ ಎಂದರು.
ಬೆಂಗಳೂರು ನಗರ ಯುವ ಘಟಕದ ಅಧ್ಯಕ್ಷ ಓಂಕಾರ್ ಮಂಜುನಾಥ್ ಮಾತನಾಡಿ, ‘ನಮ್ಮ ತಂಡ ಎಲ್ಲ ಶಾಲಾ–ಕಾಲೇಜುಗಳ ಬಳಿ ತೆರಳಿ ಕನಿಷ್ಠ 1 ಲಕ್ಷ ವಿದ್ಯಾರ್ಥಿಗಳ ಸಹಿ ಸಂಗ್ರಹ ಮಾಡಲಿದೆ. ಇದೇ 7ಕ್ಕೆ ಕಬ್ಬನ್ ಪಾರ್ಕ್ ಮೆಟ್ರೊ ನಿಲ್ದಾಣದ ಬಳಿ ಬೆಳಿಗ್ಗೆ 10ಕ್ಕೆ ಎಎಪಿ ರಾಜ್ಯ ಘಟಕದ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಅವರು ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.