ADVERTISEMENT

ಪ್ರಿಯಾಂಕ್ ಖರ್ಗೆಗೆ ಝಡ್‌ ಶ್ರೇಣಿ ಭದ್ರತೆ ಒದಗಿಸಿ: ದಲಿತ ಸಂಘರ್ಷ ಸಮಿತಿ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2025, 15:43 IST
Last Updated 16 ಅಕ್ಟೋಬರ್ 2025, 15:43 IST
<div class="paragraphs"><p>ಪ್ರಿಯಾಂಕ್ ಖರ್ಗೆ</p></div>

ಪ್ರಿಯಾಂಕ್ ಖರ್ಗೆ

   

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ನಿರ್ಬಂಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬರುತ್ತಿವೆ. ಹೀಗಾಗಿ ಅವರಿಗೆ ಝಡ್‌ ಶ್ರೇಣಿಯ ಭದ್ರತೆ ಒದಗಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ. 

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ರಾಜ್ಯ ಸಂಚಾಲಕ ಡಿ.ಜಿ. ಸಾಗರ್, ‘ಆರ್‌ಎಸ್‌ಎಸ್‌ ವಿರುದ್ಧ ಹೋರಾಟ ನಡೆಸುತ್ತಿರುವ ಪ್ರಿಯಾಂಕ್ ಖರ್ಗೆ ಅವರಿಗೆ ರಾಜ್ಯದ ಜನ ಬೆಂಬಲ ನೀಡುತ್ತಿದ್ದಾರೆ. ಆರ್‌ಎಸ್‌ಎಸ್‌ ಕಾರ್ಯಕರ್ತರು ಹಾಡುಹಗಲೇ ದೊಣ್ಣೆ ಹಿಡಿದು ರಸ್ತೆಯಲ್ಲಿ ಪಥ ಸಂಚಲನ ಮಾಡುವ ಮೂಲಕ ಕಾನೂನು ಸುವ್ಯವಸ್ಥೆಗೆ ಸವಾಲು ಹಾಕುತ್ತಿದ್ದಾರೆ. ಇಷ್ಟಾದರೂ, ಸಂವಿಧಾನದತ್ತವಾಗಿ ಅಧಿಕಾರಕ್ಕೆ ಬಂದಿರುವ ಸರ್ಕಾರ ಮೌನವಾಗಿರುವುದು ಸರಿಯಲ್ಲ’ ಎಂದು ತಿಳಿಸಿದರು.  

ADVERTISEMENT

‘ಆರ್‌ಎಸ್‌ಎಸ್‌ ವಿರುದ್ಧ ಕಾಂಗ್ರೆಸ್‌ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಪ್ರಿಯಾಂಕ್ ಖರ್ಗೆ ಹಾಗೂ ಎಚ್.ಸಿ. ಮಹದೇವಪ್ಪ ಹೊರತುಪಡಿಸಿ ದೊಡ್ಡ ಧ್ವನಿಯಲ್ಲಿ ಬೇರೆ ಯಾವೊಬ್ಬ ಕಾಂಗ್ರೆಸ್‌ ನಾಯಕರು ಮಾತನಾಡುತ್ತಿಲ್ಲ. ಇದು ದೊಡ್ಡ ದುರಂತ’ ಎಂದು ಹೇಳಿದರು. 

ಆರ್‌ಎಸ್‌ಎಸ್‌ ಎರಡು ಬಾರಿ ನಿಷೇಧಕ್ಕೆ ಒಳಗಾಗಿರುವ ಸಂಘಟನೆ ಆಗಿದೆ. ಇದು ಜಾತಿ ವ್ಯವಸ್ಥೆ, ಬ್ರಾಹ್ಮಣಶಾಹಿ ಸಿದ್ಧಾಂತಗಳನ್ನು ದೇಶದಲ್ಲಿ ಮರು ಜಾರಿಗೊಳಿಸುವ ಉದ್ದೇಶ ಹೊಂದಿದೆ. ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವಿರೋಧಿ ಚಟುವಟಿಕೆಗಳನ್ನು ಆರ್‌ಎಸ್‌ಎಸ್‌ ನಡೆಸುತ್ತಿರುವುದರಿಂದ, ಇದನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದರು. 

ಸಮಿತಿಯ ಮುಖಂಡರಾದ ಅಣ್ಣಯ್ಯ, ಮಂಜುನಾಥ್ ಸುದ್ದಿಗೋಷ್ಠಿಯಲ್ಲಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.