ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಮಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ಹಿರಿಯ ಪೊಲೀಸ್ ಅಧಿಕಾರಿ ಡಾ .ಪಿ. ಎಸ್ ಹರ್ಷ ಅವರು ಸೋಮವಾರ ಇಲ್ಲಿ ಅಧಿಕಾರ ಸ್ವೀಕರಿಸಿದರು.
ಡಾ ಪಿ ಎಸ್ ಹರ್ಷ ಅವರು ಈ ಹಿಂದೆಯೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ಈವರೆಗೆ ಆಯುಕ್ತರಾಗಿದ್ದ ಎಸ್ ಎನ್ ಸಿದ್ದರಾಮಪ್ಪ ಅವರು ಬೆಂಗಳೂರಿನ ಸಿ ಐ ಡಿ ಯ ಆರ್ಥಿಕ ಅಪರಾಧಗಳ ವಿಭಾಗದ ಡೆಪ್ಯುಟಿ ಇನ್ಸ್‍ಪೆಕ್ಟರ್ ಜನರಲ್ ಆಫ್ ಪೊಲೀಸ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.