ADVERTISEMENT

ಬೆಂಗಳೂರು: ₹1 ಲಕ್ಷ ಲಂಚ ಪಡೆಯುತ್ತಿದ್ದ ಆರೋಪದಲ್ಲಿ ಪಿಎಸ್‌ಐ ಬಂಧನ

​ಪ್ರಜಾವಾಣಿ ವಾರ್ತೆ
Published 7 ಜುಲೈ 2022, 18:18 IST
Last Updated 7 ಜುಲೈ 2022, 18:18 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ದಾಖಲಾಗಿದ್ದ ಪ್ರಕರಣ ಮುಕ್ತಾಯಗೊಳಿಸಲು ₹1 ಲಕ್ಷ ಲಂಚ ಪಡೆಯುತ್ತಿದ್ದ ಆರೋಪದಲ್ಲಿ ಬಿಎಂಟಿಎಫ್‌ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್‌ ಬೇಬಿ ಓಲೆಕಾರ ಅವರನ್ನು ಭ್ರಷ್ಟಾಚರ ನಿಗ್ರಹ ದಳದ(ಎಸಿಬಿ) ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ.

ಹೊರಮಾವು ಅಗರ ಗ್ರಾಮದಲ್ಲಿ ರಸ್ತೆ ನಿರ್ಮಾಣ ವಿಚಾರಕ್ಕೆ ಬೆನ್ಸನ್‌ಟೌನ್ ನಿವಾಸಿಯೊಬ್ಬರ ವಿರುದ್ಧ ಬಿಎಂಟಿಎಫ್ ಠಾಣೆಯಲ್ಲಿ 2019ರಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಮುಕ್ತಾಯ ಆಗಿರುವ ಬಗ್ಗೆ ಹಿಂದಿನ ಇನ್‌ಸ್ಪೆಕ್ಟರ್‌ ತಿಳಿಸಿದ್ದರೂ, ಚಾಲ್ತಿಯಲ್ಲಿದೆ ಎಂದು ಇದೇ ಠಾಣೆಯ ಕಾನ್‌ಸ್ಟೆಬಲ್ ಶ್ರೀನಿವಾಸ್‌ ಹೇಳಿದ್ದರು. ಮುಕ್ತಾಯಗೊಳಿಸಲುಇನ್‌ಸ್ಪೆಕ್ಟರ್‌ ಪರವಾಗಿ ₹1 ಲಕ್ಷ ಲಂಚದ ಬೇಡಿಕೆಯನ್ನು ಇಟ್ಟಿದ್ದರು ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ಬೇಬಿ ಅವರ ಪರವಾಗಿ ಶ್ರೀನಿವಾಸ್ ಅವರು ಗುರುವಾರ ಲಂಚ ಪಡೆಯುತ್ತಿದ್ದಾಗ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು, ಇಬ್ಬರನ್ನೂ ಬಂಧಿಸಿದ್ದಾರೆ. ಲಂಚದ ಹಣ ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ವಿವರಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.