ADVERTISEMENT

ಪಿಎಸ್ಐ ಹಗರಣ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಶಾಸಕ ಪ್ರಿಯಾಂಕ ಖರ್ಗೆ ಪಿಐಎಲ್

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2023, 0:08 IST
Last Updated 4 ಫೆಬ್ರುವರಿ 2023, 0:08 IST
   

ಬೆಂಗಳೂರು: ‘ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್ಐ) ಹುದ್ದೆಗಳ ನೇಮಕಾತಿ ಹಗರಣದಲ್ಲಿ ದಾಖಲಾಗಿರುವ ಎಫ್ಐಆರ್‌ ಹಾಗೂ ತನಿಖೆಗೆ ಸಂಬಂಧಿಸಿದ ದಾಖಲೆಗಳನ್ನು ಕೋರ್ಟ್‌ಗೆ ಒದಗಿಸಲು ನಿರ್ದೇಶಿಸಬೇಕು’ ಎಂದು ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (ಪಿಐಎಲ್) ಸಂಬಂಧಿಸಿದಂತೆ ನೋಟಿಸ್ ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಈ ಸಂಬಂಧ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಅಲೋಕ್ ಆರಾಧೆ ಹಾಗೂ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ
ವಿಚಾರಣೆ ನಡೆಸಿತು.

ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಹಾಗೂ ಸಿಐಡಿಗೆ ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿದೆ.

ADVERTISEMENT

‘ಪ್ರಕರಣಕ್ಕೆ ಸಂಬಂಧಿಸಿದಂತೆ ಈತನಕದ ವಸ್ತುಸ್ಥಿತಿಯನ್ನು ಒಳಗೊಂಡ ಆಕ್ಷೇಪಣೆಯನ್ನು ಕೋರ್ಟ್‌ಗೆ ಸಲ್ಲಿಸಿ’ ಎಂದು ಪ್ರತಿವಾದಿಗಳಿಗೆ ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.