ADVERTISEMENT

ಪಿಎಸ್‌ಐ ಆತ್ಮಹತ್ಯೆ ಪ್ರಕರಣ ಸಿಬಿಐಗೆ ವಹಿಸಿ: ರಿಪಬ್ಲಿಕನ್‌ ಪಾರ್ಟಿ ಆಫ್‌ ಇಂಡಿಯಾ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2024, 21:02 IST
Last Updated 5 ಆಗಸ್ಟ್ 2024, 21:02 IST
<div class="paragraphs"><p>&nbsp;ಪಿಎಸ್‌ಐ ಪರಶುರಾಮ್‌</p></div>

 ಪಿಎಸ್‌ಐ ಪರಶುರಾಮ್‌

   

ಬೆಂಗಳೂರು: ಯಾದಗಿರಿ ಪೊಲೀಸ್‌ ಠಾಣೆಯ ಪಿಎಸ್‌ಐ ಪರಶುರಾಮ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ರಿಪಬ್ಲಿಕನ್‌ ಪಾರ್ಟಿ ಆಫ್‌ ಇಂಡಿಯಾ ಸದಸ್ಯರು ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

‘ಕಾಂಗ್ರೆಸ್‌ ಶಾಸಕ ಚನ್ನಾರೆಡ್ಡಿ ಪಾಟೀಲ, ಅವರ ಮಗ ಪಂಪನಗೌಡ ಅವರನ್ನು ಕೂಡಲೇ ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕು. ಆರೋಪಿಗಳಿಗೆ ಜಾಮೀನು ನೀಡಬಾರದು’ ಎಂದು ಪ್ರತಿಭಟನಕಾರರು
ಆಗ್ರಹಿಸಿದರು. ‘ಪಿಎಸ್‌ಐ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡುವುದರ ಜೊತೆಗೆ ಪೊಲೀಸ್‌ ರಕ್ಷಣೆ ಒದಗಿಸಬೇಕು. ಪರಶುರಾಮ ಅವರ ಪತ್ನಿ ಶ್ವೇತಾ ಅವರಿಗೆ ಸರ್ಕಾರಿ ಉದ್ಯೋಗ ನೀಡಬೇಕು. ವರ್ಗಾವಣೆಗೆ ಲಂಚದ ಬೇಡಿಕೆ ಇರಿಸಿದ ಆರೋಪಿಗಳಾದ ಶಾಸಕ ಮತ್ತು ಅವರ ಪುತ್ರನನ್ನು ಬಂಧಿಸಿ, ನ್ಯಾಯ ಒದಗಿಸಬೇಕು’ ಎಂದು ಒತ್ತಾಯಿಸಿದರು. 

ADVERTISEMENT

‘ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಕನಕಪುರ ತಾಲ್ಲೂಕಿನ
ಮಾಳಗಾಳದಲ್ಲಿ ಈಚೆಗೆ ದಲಿತ ಯುವಕನೊಬ್ಬನ ಕೈ ಕತ್ತರಿಸಲಾಗಿತ್ತು. ಈಗ ಪರಶುರಾಮ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ ಸಮುದಾಯ ಆತಂಕಕ್ಕೆ ಒಳಗಾಗಿದೆ. ಆದ್ದರಿಂದ, ಮುಖ್ಯಮಂತ್ರಿ ಅವರು ಕೂಡಲೇ ದಲಿತ ಸಂಘಟನೆಗಳ ಮುಖಂಡರೊಂದಿಗೆ ರಾಜ್ಯಮಟ್ಟದ ಸಭೆ ಆಯೋಜಿಸಿ, ದಲಿತರಿಗೆ ರಕ್ಷಣೆ ಒದಗಿಸುವ ಭರವಸೆ ನೀಡಬೇಕು’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.