
ಸಾಂದರ್ಭಿಕ ಚಿತ್ರ
– ಐಸ್ಟಾಕ್ ಚಿತ್ರ
ಬೆಂಗಳೂರು: ರೌಡಿಶೀಟರ್ ದಾಸನ ಜತೆಗೆ ಕೇಕ್ ಕತ್ತರಿಸಿ ಉಡುಗೊರೆ ಪಡೆದುಕೊಂಡಿದ್ದ ಯಲಹಂಕ ಉಪನಗರ ಪೊಲೀಸ್ ಠಾಣೆಯ ಪಿಎಸ್‌ಐ ನಾಗರಾಜ್ ಅವರನ್ನು ಅಮಾನತುಗೊಳಿಸಿ ಪೂರ್ವ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಆದೇಶಿಸಿದ್ದಾರೆ.
ಯಲಹಂಕ ಉಪ ವಿಭಾಗದ ಸಹಾಯಕ ಕಮಿಷನರ್ ಹಾಗೂ ಪೊಲೀಸ್ ಇನ್‌ಸ್ಪೆಕ್ಟರ್ ಸಲ್ಲಿಸಿದ ವರದಿ ಹಾಗೂ ಅದರ ಜತೆಗೆ ಲಗತ್ತಿಸಿರುವ ದಾಖಲೆಗಳನ್ನು ಆಧರಿಸಿ ಅಮಾನತು ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ರಿಯಲ್ ಎಸ್ಟೇಟ್‌ಗೆ ಸಂಬಂಧಿಸಿದಂತೆ ಅಕ್ರಮ ಚಟುವಟಿಕೆಯಲ್ಲಿ ದಾಸ ಭಾಗಿ ಆಗಿದ್ದಾನೆ. ಆತನ ಜತೆಗೆ ಫೋಟೊ ತೆಗೆಸಿಕೊಂಡಿದ್ದು, ಸಮವಸ್ತ್ರದಲ್ಲಿ ಆತನ ಜತೆಗೆ ಜನ್ಮದಿನಾಚರಣೆಯ ಕೇಕ್ ಇಟ್ಟುಕೊಂಡು ಉಡುಗೊರೆ ಪಡೆಯುತ್ತಿರುವ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಈ ಘಟನೆಯಿಂದ ಇಲಾಖೆಯು ಮುಜುಗರಕ್ಕೆ ಒಳಗಾಗಿದೆ. ಇಲಾಖೆಗೆ ಕೆಟ್ಟಹೆಸರು ಬರುವುದರ ಜತೆಗೆ ಸಮಾಜಕ್ಕೆ ಕೆಟ್ಟ ಸಂದೇಶ ನೀಡಿದಂತಾಗುತ್ತದೆ. ನಾಗರಾಜ್ ಅವರು ದುರ್ನಡತೆ ತೋರಿ ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಇಲಾಖೆ ವಿಚಾರಣೆ ಕಾಯ್ದಿರಿಸಿ ಅಮಾನತು ಮಾಡಲಾಗಿದೆ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.