ಬೆಂಗಳೂರು:ಪ್ರಥಮ ಮತ್ತು ದ್ವಿತೀಯ ಪಿಯು ತರಗತಿಗಳ ಎನ್.ಸಿ.ಇ.ಆರ್.ಟಿ ಪಠ್ಯಕ್ರಮದ 35 ಶೀರ್ಷಿಕೆಗಳ ಪುಸ್ತಕಗಳು ಮಾರುಕಟ್ಟೆಯಲ್ಲಿ ಲಭ್ಯ ಇವೆ ಎಂದು ಕರ್ನಾಟಕ ಪಠ್ಯಪುಸ್ತಕ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.
ಸಂಘವು ಮೊದಲ ಬಾರಿಗೆ ಈ ಪುಸ್ತಕಗಳನ್ನು ಮುದ್ರಿಸುತ್ತಿದ್ದು, ಎನ್.ಸಿ.ಇ.ಆರ್.ಟಿ ಪಠ್ಯಪುಸ್ತಕಗಳಿಗಿಂತ ಕಡಿಮೆ ಬೆಲೆಯಲ್ಲಿ ಲಭ್ಯ ಇವೆ ಎಂದು ಸಂಘದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.
ಈ ಪುಸ್ತಕಗಳನ್ನು ಗರಿಷ್ಠ ಮಾರಾಟ ಬೆಲೆಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಲ್ಲಿ mdktbs2018@gmail.com ಇ–ಮೇಲ್ ಮೂಲಕ ದೂರು ನೀಡಬಹುದು ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.