ADVERTISEMENT

ಮರುಮೌಲ್ಯ ಮಾಪನಕ್ಕೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 8 ಜುಲೈ 2022, 19:14 IST
Last Updated 8 ಜುಲೈ 2022, 19:14 IST

ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾದ ನಂತರ ಉತ್ತರ ಪತ್ರಿಕೆಗಳ ಸ್ಕ್ಯಾನ್‌ ಮಾಡಿದ ಪ್ರತಿಗಳಿಗಾಗಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದು, ಜುಲೈ 6ರಿಂದಲೇ ವೆಬ್‌ಸೈಟ್‌ನಲ್ಲಿ ಪ್ರತಿಗಳನ್ನು ಅಪ್‌ ಲೋಡ್‌ ಮಾಡಲಾಗುತ್ತಿದೆ. ವಿದ್ಯಾ ರ್ಥಿಗಳು ಪ್ರತಿಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಲು ಜುಲೈ 15ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಮರುಮೌಲ್ಯಮಾಪನ ಮತ್ತು ಮರುಎಣಿಕೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 18ರವರೆಗೆ ಮುಂದೂಡಲಾಗಿದೆ. ಸ್ಕ್ಯಾನ್‌ ಮಾಡಿದ ಪ್ರತಿ ತೆಗೆದುಕೊಂಡವರು ಮಾತ್ರ ಅರ್ಜಿ ಸಲ್ಲಿಸಬಹುದು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ.

ದ್ವಿತೀಯ ಪಿಯು ಪ್ರವೇಶಕ್ಕೆ 22ರವರೆಗೆ ಅವಕಾಶ: ದ್ವಿತೀಯ ಪಿಯು ತರ ಗತಿಗಳಿಗೆ ಪ್ರವೇಶ ಪಡೆಯುವ
ವಿದ್ಯಾರ್ಥಿ ಗಳಿಗೆ ಜುಲೈ 22ರವರೆಗೆ ಅವಕಾಶ ಕಲ್ಪಿಸಲಾಗಿದೆ. ವಿಶೇಷ ದಂಡಶುಲ್ಕ ಪಾವತಿಸಿ, ಪ್ರವೇಶ ಪಡೆಯಬಹುದು. ಎಂದು ಪ್ರಕಟ ಣೆಯಲ್ಲಿ ಸೂಚಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.