ADVERTISEMENT

PUC Exams: ವಿದ್ಯಾರ್ಥಿಗಳಿಗೆ ಬಸ್‌ ಉಚಿತ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2024, 15:16 IST
Last Updated 21 ಫೆಬ್ರುವರಿ 2024, 15:16 IST
   

ಬೆಂಗಳೂರು: ಪರೀಕ್ಷೆ ಬರೆಯಲು ತೆರಳುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಉಚಿತ ಪ್ರಯಾಣದ ಅವಕಾಶವನ್ನು ಕಲ್ಪಿಸಿದೆ.

ಮಾರ್ಚ್‌ 1ರಿಂದ ಮಾರ್ಚ್‌ 22ರವರೆಗೆ ಪರೀಕ್ಷೆಗಳು ನಡೆಯಲಿವೆ. ಈ ಸಮಯದಲ್ಲಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ವಿದ್ಯಾರ್ಥಿಗಳು ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಮತ್ತು ಪರೀಕ್ಷಾ ಕೇಂದ್ರದಿಂದ ವಾಸಸ್ಥಳಕ್ಕೆ ಪ್ರಯಾಣಿಸಬಹುದು. ಹೆಚ್ಚುವರಿ ಬಸ್‌ಗಳ ಅವಶ್ಯಕತೆ ಕಂಡು ಬಂದರೆ ಅದಕ್ಕೂ ಕ್ರಮ ಕೈಗೊಳ್ಳಲಾಗುವುದು ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT