ADVERTISEMENT

ವರ್ಗಾವಣೆ: ಎಲ್ಲ ಉಪನ್ಯಾಸಕರ ಪರಿಗಣಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 25 ಜುಲೈ 2020, 7:03 IST
Last Updated 25 ಜುಲೈ 2020, 7:03 IST

ಬೆಂಗಳೂರು: ರಾಜ್ಯದ ಎಲ್ಲ ವಲಯಗಳಲ್ಲಿನ, ಎಲ್ಲ ವಿಷಯಗಳ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ವರ್ಗಾವಣೆಯಲ್ಲಿ ಅವಕಾಶ ನೀಡಬೇಕು ಎಂದು ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಮನವಿ ಮಾಡಿದೆ.

‘ಹೈದರಾಬಾದ್‌ ಕರ್ನಾಟಕದಲ್ಲಿ 11 ವಿಷಯಗಳ ಮತ್ತು ಹೈದರಾಬಾದ್ ಕರ್ನಾಟಕೇತರ ಪ್ರದೇಶಗಳಲ್ಲಿ ಕೇವಲ 4 ವಿಷಯಗಳ ‘ಸಿ’ ವಲಯದ ಉಪನ್ಯಾಸಕರಿಗೆ ಮಾತ್ರ ಅವಕಾಶ ನೀಡಲಾಗಿದೆ. ಇದರಿಂದ ವಿವಿಧ ವಿಷಯ ಮತ್ತು ವಲಯಗಳ ಸಾವಿರಾರು ಉಪನ್ಯಾಸಕರಿಗೆ ಅನ್ಯಾಯವಾಗಿದೆ’ ಎಂದು ಸಂಘದ ಅಧ್ಯಕ್ಷ ಎ.ಎಚ್. ನಿಂಗೇಗೌಡ ಹೇಳಿದ್ದಾರೆ.

‘ಸಿ’ ವಲಯದಲ್ಲಿ ಮೂರು ವರ್ಷಗಳ ನಿರಂತರ ಸೇವೆ ಸಲ್ಲಿಸುತ್ತಿರುವ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು ಮಾತ್ರ ವರ್ಗಾವಣೆಗೆ ಅರ್ಹರು ಎಂಬ ನಿಯಮದಲ್ಲಿ ಸಡಿಲಿಕೆ ಮಾಡಬೇಕು. ಎ,ಬಿ ಮತ್ತು ಸಿ ವಲಯಗಳ ಎಲ್ಲ 34 ವಿಷಯಗಳ ಉಪನ್ಯಾಸಕರು ವರ್ಗಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಸಮಾನ ಅವಕಾಶ ಕಲ್ಪಿಸಿಕೊಡಬೇಕು ಎಂದು ಅವರು ಸಚಿವರು ಮತ್ತು ಇಲಾಖೆಯ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ADVERTISEMENT

ವಿಧಾನ ಪರಿಷತ್‌ ಸದಸ್ಯರಾದ ಪ್ರೊ.ಎಸ್.ವಿ. ಸಂಕನೂರ, ಕೆ.ಟಿ. ಶ್ರೀಕಂಠೇಗೌಡ, ಎಸ್.ಎಲ್. ಭೋಜೇಗೌಡ ಅವರು ಈ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್‌ ಅವರಿಗೆ ಪತ್ರ ಬರೆದಿದ್ದು, ಎಲ್ಲ ವಿಷಯಗಳ ಉಪನ್ಯಾಸಕರನ್ನು ವರ್ಗಾವಣೆಗೆ ಪರಿಗಣಿಸಲು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.