ADVERTISEMENT

ಶೌಚಾಲಯ: ವರದಿ ಸಲ್ಲಿಸಲು ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2020, 22:07 IST
Last Updated 30 ನವೆಂಬರ್ 2020, 22:07 IST
ಕರ್ನಾಟಕ ಹೈಕೋರ್ಟ್‌
ಕರ್ನಾಟಕ ಹೈಕೋರ್ಟ್‌   

ಬೆಂಗಳೂರು: ನಗರದಲ್ಲಿ ಸಾರ್ವಜನಿಕ ಶೌಚಾಲಯಗಳು ಎಷ್ಟು ಕಡೆ ಅಗತ್ಯವಿದೆ ಎಂಬುದರ ಕುರಿತು ಸಮಗ್ರ ಅಧ್ಯಯನ ವರದಿ ಸಲ್ಲಿಸುವಂತೆ ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಲೆಟ್ಜ್‌ಕಿಟ್ ಫೌಂಡೇಷನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿದೆ.

ಶೌಚಾಲಯಗಳಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದ ಪೀಠ, ವರದಿ ಸಲ್ಲಿಸಲು ಪಾಲಿಕೆಗೆ ಸಮಯಾವಕಾಶ ನೀಡಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.