ADVERTISEMENT

₹1,100 ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಪಬ್ಲಿಕ್ ಪ್ರಾಸಿಕ್ಯೂಟರ್

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2025, 23:00 IST
Last Updated 29 ಅಕ್ಟೋಬರ್ 2025, 23:00 IST
<div class="paragraphs"><p>ಕರ್ನಾಟಕ ಲೋಕಾಯುಕ್ತ</p></div>

ಕರ್ನಾಟಕ ಲೋಕಾಯುಕ್ತ

   

– ಪ್ರಜಾವಾಣಿ ಚಿತ್ರ

ಬೆಂಗಳೂರು: ಕ್ರಿಮಿನಲ್ ಪ್ರಕರಣ ಒಂದಕ್ಕೆ ಆಕ್ಷೇಪಣೆ ಸಲ್ಲಿಸಲು ₹1,100 ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ.ಎಸ್. ಲತಾ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದರು.

ADVERTISEMENT

ಈ ಬಗ್ಗೆ ಎಂ. ರಾಜಾ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಆರೋಪಿ ಕೆ.ಎಸ್. ಲತಾ ಅವರು ಎಂ. ರಾಜಾ ಅವರಿಂದ ಲಂಚ ಸ್ವೀಕರಿಸುವಾಗ ದಾಳಿ ನಡೆಸಿ ಬಂಧಿಸಲಾಗಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ. 

ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆಸಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.