ADVERTISEMENT

ಸಂಚಾರ ಠಾಣೆಗೆ ಬಂದ ಜನ: ಸಮಸ್ಯೆ ಆಲಿಸಿದ ಪೊಲೀಸರು

​ಪ್ರಜಾವಾಣಿ ವಾರ್ತೆ
Published 8 ಜುಲೈ 2023, 23:30 IST
Last Updated 8 ಜುಲೈ 2023, 23:30 IST
ನಗರದ ಹಲಸೂರು ಸಂಚಾರ ಠಾಣೆಯಲ್ಲಿ ಶನಿವಾರ ಆಯೋಜಿಸಿದ್ದ ಜನಸಂಪರ್ಕ ಸಭೆಯಲ್ಲಿ ಪಾಲ್ಗೊಂಡಿದ್ದ ಸಾರ್ವಜನಿಕರು
ನಗರದ ಹಲಸೂರು ಸಂಚಾರ ಠಾಣೆಯಲ್ಲಿ ಶನಿವಾರ ಆಯೋಜಿಸಿದ್ದ ಜನಸಂಪರ್ಕ ಸಭೆಯಲ್ಲಿ ಪಾಲ್ಗೊಂಡಿದ್ದ ಸಾರ್ವಜನಿಕರು   

ಬೆಂಗಳೂರು: ನಗರದಲ್ಲಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಲು ಹಾಗೂ ಸಂಚಾರ ಸಂಬಂಧಿತ ಸಮಸ್ಯೆಗಳನ್ನು ಆಲಿಸಲು ‍ಪೊಲೀಸ್ ಠಾಣೆಗಳಲ್ಲಿ ಶನಿವಾರ ಜನಸಂಪರ್ಕ ಸಭೆ ನಡೆಸಲಾಯಿತು.

ನಗರದ ಸಂಚಾರ ಪೊಲೀಸ್ ಠಾಣೆಗಳಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಜರುಗಿದ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿದ್ದರು. ಎಸಿಪಿ ಹಾಗೂ ಇನ್‌ಸ್ಪೆಕ್ಟರ್‌ಗಳು, ಠಾಣೆಯಲ್ಲಿ ಹಾಜರಿದ್ದು ಜನರ ಸಮಸ್ಯೆಗಳನ್ನು ಆಲಿಸಿದರು.

ಠಾಣೆವಾರು ಸಭೆಗಳನ್ನು ಆಯೋಜಿಸಿದ್ದರಿಂದ, ಆಯಾ ಠಾಣೆ ವ್ಯಾಪ್ತಿಯಲ್ಲಿ ವಾಸವಿರುವ ಜನರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು.

ADVERTISEMENT

‘ಪಾದಚಾರಿ ಮಾರ್ಗಗಳು ಸೂಕ್ತವಾಗಿಲ್ಲ. ಇದರಿಂದ ಜನರ ಓಡಾಟಕ್ಕೆ ತೊಂದರೆಯಾಗುತ್ತಿದೆ. ಕೆಲ ರಸ್ತೆಗಳಲ್ಲಿ ವಾಹನಗಳ ದಟ್ಟಣೆ ಹೆಚ್ಚಿದ್ದು, ಇದರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ’ ಎಂದು ಜನರು ಒತ್ತಾಯಿಸಿದರು.

‘ರಸ್ತೆಗಳಲ್ಲಿ ಅಪಾಯಕಾರಿ ರೀತಿಯಲ್ಲಿ ವ್ಹೀಲೆ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಬಾಲಕರು ಇಂಥ ಕೃತ್ಯಗಳಲ್ಲಿ ತೊಡಗುತ್ತಿದ್ದಾರೆ. ಅಂಥವರನ್ನು ಪತ್ತೆ ಮಾಡಿ ಬಾಲಕರ ಜೊತೆ ಪೋಷಕರ ವಿರುದ್ಧವೂ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಸಮಸ್ಯೆಗಳನ್ನು ಆಲಿಸಿದ ಪೊಲೀಸರು, ‘ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು. ಸಾರ್ವಜನಿಕರೂ ಪೊಲೀಸರ ಕೆಲಸಕ್ಕೆ ಸಹಕಾರ ನೀಡಬೇಕು’ ಎಂದು ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.