ಬೆಂಗಳೂರು: ವೈದ್ಯರಿಗೆ ಬ್ಲ್ಯಾಕ್‌ಮೇಲ್ ಮಾಡಿದ ಆರೋಪದಡಿ ಬಂಧಿತನಾಗಿದ್ದ ಪತ್ರಕರ್ತ ಹೇಮಂತ್ ಕಶ್ಯಪ್‌ಗೆ ನಗರದ 7ನೇ ಎಸಿಎಂಎಂ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿದೆ.
ಮಾರ್ಚ್ 19ರಂದು ಕಶ್ಯಪ್‌ನನ್ನು ಪೊಲೀಸರು ಬಂಧಿಸಿದ್ದರು.
ಶನಿವಾರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ‘ಘಟನೆಗೆ ಸಂಬಂಧಿಸಿದ ಸಾಕ್ಷ್ಯ ನಾಶ ಮಾಡಬಾರದು. ಪೊಲೀಸ್ ವಿಚಾರಣೆಗೆ ಸಹಕರಿಸಬೇಕು’ ಎಂಬ ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.