ಬೆಂಗಳೂರು: ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ಪುಸ್ತಕ ಮಳಿಗೆಗಳಿಗೆ ಕನಿಷ್ಠ ಬೆಲೆ ನಿಗದಿ ಮಾಡುವಂತೆ ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘವು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಅವರಿಗೆ ಮನವಿ ಮಾಡಿದೆ.
ಕನ್ನಡ ಪುಸ್ತಕಗಳಿಗೆ ಓದುಗರನ್ನು ಸೃಷ್ಟಿ ಮಾಡಿ, ಕನ್ನಡ ಭಾಷೆಯನ್ನು ಮತ್ತಷ್ಟು ಶ್ರೀಮಂತಗೊಳಿಸಲು ಎಲ್ಲರ ಸಹಕಾರ ಅಗತ್ಯ. ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕ ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಮಾಡುವಾಗ ಕನ್ನಡ ಪುಸ್ತಕ ಮಳಿಗೆಗಳಿಗೆ ಬಾಡಿಗೆ ದರ ಕಡಿತ ಮಾಡಬೇಕು. ಈಗ ಒಂದು ಮಳಿಗೆಗೆ ₹ 4 ಸಾವಿರ ನಿಗದಿ ಮಾಡಲಾಗಿದ್ದು, ಇದನ್ನು ₹ 3 ಸಾವಿರದಿಂದ ₹ 2 ಸಾವಿರಕ್ಕೆ ಇಳಿಸಬೇಕು. ಇದರಿಂದ ಲೇಖಕರು, ಪ್ರಕಾಶಕರು ಹಾಗೂ ಸಂಘ–ಸಂಸ್ಥೆಗಳಿಗೆ ಅನುಕೂಲವಾಗಲಿದೆ ಎಂದು ಸಂಘದ ಅಧ್ಯಕ್ಷ ನಿಡಸಾಲೆ ಪುಟ್ಟಸ್ವಾಮಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.