ADVERTISEMENT

ಬಜೆಟ್‌ನಲ್ಲಿ ಪುಸ್ತಕ ಖರೀದಿ ₹ 25 ಕೋಟಿ ಮೀಸಲಿಡಲು ಪ್ರಕಾಶಕ ಒತ್ತಾಯ

​ಪ್ರಜಾವಾಣಿ ವಾರ್ತೆ
Published 13 ಜನವರಿ 2026, 19:16 IST
Last Updated 13 ಜನವರಿ 2026, 19:16 IST
<div class="paragraphs"><p>ಸಾದರ ಸ್ವೀಕಾರ</p></div>

ಸಾದರ ಸ್ವೀಕಾರ

   

ಬೆಂಗಳೂರು: ‘ಏಕಗವಾಕ್ಷಿ ಯೋಜನೆಯಡಿ ಕನ್ನಡ ಪುಸ್ತಕಗಳ ಖರೀದಿಗೆ ಮುಂಬರುವ ಬಜೆಟ್‌ನಲ್ಲಿ ₹ 25 ಕೋಟಿ ಅನುದಾನ ಮೀಸಲಿಡಬೇಕು’ ಎಂದು ಕರ್ನಾಟಕ ಲೇಖಕ-ಪ್ರಕಾಶಕರ ಮತ್ತು ಮುದ್ರಕರ ಒಕ್ಕೂಟವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿದೆ. 

‘ತಮ್ಮ ಸರ್ಕಾರ ಕಳೆದ ಬಜೆಟ್‌ನಲ್ಲಿ ₹ 10 ಕೋಟಿ ಅನುದಾನವನ್ನು ಕನ್ನಡ ಪುಸ್ತಕಗಳ ಖರೀದಿಗೆ ಮೀಸಲಿಟ್ಟಿತ್ತು. ಈಗ ಕನ್ನಡ ಪುಸ್ತಕೋದ್ಯಮವು ಹಲವು ಗಂಭೀರ ಬಿಕ್ಕಟ್ಟುಗಳನ್ನು ಎದುರಿಸುತ್ತಿದೆ. ಕಚ್ಚಾ ವಸ್ತುಗಳ ಬೆಲೆ ಏರಿಕೆ, ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮೊದಲಾದ ಅಡೆತಡೆಗಳಿಂದ ಪುಸ್ತಕೋದ್ಯಮದ ಮೇಲೆ ಹೆಚ್ಚಿನ ಒತ್ತಡ ಉಂಟಾಗಿದೆ. ಇಂತಹ ಪರಿಸ್ಥಿತಿಯಲ್ಲಿಯೂ ಕನ್ನಡ ಸಾಹಿತ್ಯ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿರುವುದು ಹೆಮ್ಮೆಯ ವಿಷಯ. ಆದರೆ, ಸರ್ಕಾರದ ಕೆಲವು ನೀತಿ ನಿರ್ಧಾರಗಳ ಕಾರಣದಿಂದ ಪುಸ್ತಕಗಳ ಖರೀದಿ ಹಾಗೂ ವಿತರಣೆ ಪ್ರಕ್ರಿಯೆಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಆದ್ದರಿಂದ ಬಜೆಟ್‌ನಲ್ಲಿ ಅನುದಾನ ಮೀಸಲಿಡಬೇಕು’ ಎಂದು ಪತ್ರದಲ್ಲಿ ಒತ್ತಾಯಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.