ಬೆಂಗಳೂರು: ಪ್ರಸಕ್ತ ಸಾಲಿನ (2021–22) ದ್ವಿತೀಯ ಪಿಯು ದಾಖಲಾತಿ ದಿನಾಂಕವನ್ನು ಮತ್ತೆ ವಿಸ್ತರಿಸಲಾಗಿದೆ. ದಂಡ ಶುಲ್ಕವಿಲ್ಲದೆ ಇದೇ 28ರವರೆಗೆ ದಾಖಲಾತಿ ಮಾಡಿಕೊಳ್ಳಬಹುದು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.
₹670 ದಂಡ ಶುಲ್ಕದೊಂದಿಗೆ ಆ.30ರಿಂದ ಸೆ.11ರವರೆಗೆ, ₹2,890 ವಿಶೇಷ ದಂಡ ಶುಲ್ಕದೊಂದಿಗೆ ಸೆ.13ರಿಂದ 25ರವರೆಗೆ ದಿನಾಂಕವನ್ನು ವಿಸ್ತರಿಸಲಾಗಿದೆ.
ಈ ಮೊದಲು, ದಾಖಲಾತಿಗೆ ಆ.13 ಕೊನೆಯ ದಿನವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.