ADVERTISEMENT

ಪಲ್ಸ್‌ ಪೋಲಿಯೊ ಅಭಿಯಾನ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 9 ಜನವರಿ 2021, 19:34 IST
Last Updated 9 ಜನವರಿ 2021, 19:34 IST
ಮಗುವಿಗೆ ಪೋಲಿಯೊ ಲಸಿಕೆ ಹಾಕುತ್ತಿರುವುದು–ಸಾಂದರ್ಭಿಕ ಚಿತ್ರ
ಮಗುವಿಗೆ ಪೋಲಿಯೊ ಲಸಿಕೆ ಹಾಕುತ್ತಿರುವುದು–ಸಾಂದರ್ಭಿಕ ಚಿತ್ರ   

ಬೆಂಗಳೂರು: ಇದೇ 17ರಂದು ನಡೆಸಲು ಉದ್ದೇಶಿಸಿದ್ದ ಪಲ್ಸ್‌ ಪೋಲಿಯೊ ಹನಿ ಹಾಕುವ ಅಭಿಯಾನವನ್ನು ಕೇಂದ್ರ ಸರ್ಕಾರ ಅನಿರ್ದಿಷ್ಟಾವಧಿವರೆಗೆ ಮುಂದೂಡಿದೆ.

ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಈ ಕುರಿತು ಎಲ್ಲ ರಾಜ್ಯಗಳ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿದೆ.

ಈ ಪತ್ರವನ್ನು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ತನ್ನ ಟ್ವಿಟರ್ ಖಾತೆಯಲ್ಲಿ ಶನಿವಾರ ಹಂಚಿಕೊಂಡಿದೆ. ಪೋಲಿಯೊ ಹನಿ ಲಸಿಕೆ ಅಭಿಯಾನ ಮುಂದೂಡಲು ಕಾರಣ ಏನೆಂದು ಕೇಂದ್ರ ಸರ್ಕಾರ ಪತ್ರದಲ್ಲಿ ತಿಳಿಸಿಲ್ಲ. ಮುಂದೆ ಯಾವಾಗ ನಡೆಸಲಾಗುತ್ತದೆ ಎಂಬ ಬಗ್ಗೆಯೂ ಕೇಂದ್ರವು ಸ್ಪಷ್ಟಪಡಿಸಿಲ್ಲ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.