ADVERTISEMENT

64 ಲಕ್ಷ ಮಕ್ಕಳಿಗೆ ಪೋಲಿಯೊ ಹನಿ: ಗುರಿ ಮೀರಿದ ಸಾಧನೆ

​ಪ್ರಜಾವಾಣಿ ವಾರ್ತೆ
Published 22 ಜನವರಿ 2020, 21:51 IST
Last Updated 22 ಜನವರಿ 2020, 21:51 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಾದ್ಯಂತ ನಡೆದ ಈ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೊ ನಿರ್ಮೂಲನೆ ಅಭಿಯಾನ ಬುಧವಾರ ಅಂತ್ಯವಾಗಿದ್ದು,64 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಪೋಲಿಯೊ ಹನಿ ಹಾಕಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಈ ಬಾರಿಯ ಅಭಿಯಾನದಲ್ಲಿಐದು ವರ್ಷದೊಳಗಿನ 63.74 ಲಕ್ಷ ಮಕ್ಕಳನ್ನು ತಲುಪುವ ಗುರಿಯನ್ನು ಹೊಂದಿತ್ತು.

ಮೊದಲ ದಿನವಾದ ಜ.19ಕ್ಕೆ 58,10,493 ಮಕ್ಕಳಿಗೆ ಪೋಲಿಯೊ ಹನಿ ಹಾಕುವ ಮೂಲಕ ಶೇ 91.16 ರಷ್ಟು ಗುರಿ ಸಾಧನೆ ಮಾಡಲಾಗಿತ್ತು. ಬಳಿಕ ಜ.20 ರಂದು 3.65 ಲಕ್ಷ ಹಾಗೂ ಜ.21ರಂದು 2.26 ಲಕ್ಷ ಮಕ್ಕಳಿಗೆ ಹನಿ ಹಾಕಲಾಗಿದೆ. ಅಭಿಯಾನದ ಅವಧಿಯಲ್ಲಿ64.01 ಲಕ್ಷ ಮಕ್ಕಳನ್ನು ತಲುಪುವ ಮೂಲಕ ಇಲಾಖೆ ಶೇ 100.44 ರಷ್ಟು ‌ ಸಾಧನೆ ಮಾಡಿದೆ.

ADVERTISEMENT

ಬೆಂಗಳೂರು ಗ್ರಾಮಾಂತರದಲ್ಲಿ ಶೇ 107.50ರಷ್ಟು ಗುರಿ ಸಾಧನೆಯಾಗಿದ್ದು, ಪ್ರಥಮ ಸ್ಥಾನ ಪಡೆದಿದೆ. ರಾಮನಗರ ಜಿಲ್ಲೆಯಲ್ಲಿಯೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಶೇ 106.63 ರಷ್ಟು ಮಕ್ಕಳನ್ನು ತಲುಪಲಾಗಿದೆ. ಯಾದಗಿರಿ ಜಿಲ್ಲೆಯಲ್ಲಿಶೇ 95.79 ರಷ್ಟು ಗುರಿ ತಲುಪವಲ್ಲಿ ಯಶಸ್ವಿಯಾಗಿದ್ದು, ಕೊನೆಯ ಸ್ಥಾನದಲ್ಲಿದೆ.

‘ಪೋಲಿಯೊ ಹನಿಯಿಂದ ತಪ್ಪಿಸಿಕೊಂಡ ಮಕ್ಕಳನ್ನು ಗುರುತಿಸಲುಗುರುವಾರದಿಂದ 10 ದಿನಗಳ ಕಾಲ ಸಮೀಕ್ಷೆ ನಡೆಯಲಿದೆ. ಲಸಿಕೆ ಹಾಕಿಲ್ಲ ಎಂದು ಗುರುತು ಮಾಡಿರುವ ಮನೆಗಳಿಗೆ ತೆರಳಿ, ಕಾರಣಗಳನ್ನು ತಿಳಿದುಕೊಳ್ಳಲಾಗುವುದು. ಮಗು ಮನೆಯಲ್ಲಿಯೇ ಇದ್ದಲ್ಲಿ ಪೋಲಿಯೊ ಹನಿ ಹಾಕಲಾಗುತ್ತದೆ’ ಎಂದು ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.