ಬೆಂಗಳೂರು: ಸ್ವಾತಂತ್ರ್ಯಅಮೃತ ಮಹೋತ್ಸವದ ನೆನಪಿಗಾಗಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳೇ ನಿರ್ಮಿಸಿದ `ಪುನೀತ್' ಉಪಗ್ರಹವನ್ನು ನ.15ರಿಂದ ಡಿ.31ರ ಮಧ್ಯೆಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಉಡಾವಣೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ವಿದ್ಯಾರ್ಥಿ ನಿರ್ಮಿತ ಉಪಗ್ರಹ ಯೋಜನೆ ಕುರಿತು ವಿಕಾಸಸೌಧದಲ್ಲಿ ಗುರುವಾರ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು.
ಶಾಲಾ ಮಕ್ಕಳಲ್ಲಿ ವೈಜ್ಞಾನಿಕ ಕುತೂಹಲ, ಆಸಕ್ತಿ ಬೆಳೆಸಲು ಪ್ರೌಢಶಾಲಾ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗೆ ಜಿಲ್ಲೆ, ವಿಭಾಗೀಯ, ರಾಜ್ಯ ಮಟ್ಟದ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ. ಅಂತಿಮವಾಗಿ 1 ಸಾವಿರ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಉಪಗ್ರಹ ಉಡಾವಣೆ ಕಾರ್ಯಕ್ರಮಕ್ಕೆ ಕರೆದುಕೊಂಡು ಹೋಗಲಾಗುವುದು ಎಂದು ಮಾಹಿತಿ ನೀಡಿದರು.
ಬೆಂಗಳೂರು ವಲಯದ ಶಾಲೆಗಳ ವಿದ್ಯಾರ್ಥಿಗಳು 'ಕೆಜಿಎಸ್ 3 ಸ್ಯಾಟ್' ಉಪಗ್ರಹವನ್ನು ₹1.90 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸುತ್ತಿದ್ದಾರೆ. ಮಲ್ಲೇಶ್ವರ ಸರ್ಕಾರಿ ಪ್ರೌಢಶಾಲೆಯಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದರು.
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ವ್ಯವ ಸ್ಥಾಪಕ ನಿರ್ದೇಶಕ ಬಸವರಾಜ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.