ADVERTISEMENT

ಪುಷ್ಪಗಿರಿ ಮಠದಲ್ಲಿ ನೈಸರ್ಗಿಕ ಕೃಷಿ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2025, 1:13 IST
Last Updated 24 ಡಿಸೆಂಬರ್ 2025, 1:13 IST
<div class="paragraphs"><p>ಪ್ರಾತಿನಿಧಿಕ ಚಿತ್ರ&nbsp;</p></div>

ಪ್ರಾತಿನಿಧಿಕ ಚಿತ್ರ 

   

ಬೆಂಗಳೂರು: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನೈಸರ್ಗಿಕ ಕೃಷಿ ಪದ್ಧತಿಯ ಕಾರ್ಯಾಗಾರವು ಜನವರಿ 3ರಿಂದ ನಾಲ್ಕು ದಿನ ನಡೆಯಲಿದೆ.

ಬೇಲೂರು ತಾಲ್ಲೂಕಿನ ಹಳೇಬೀಡಿನಲ್ಲಿರುವ ಪುಷ್ಪಗಿರಿ ಮಠದಲ್ಲಿ ನಡೆಯಲಿರುವ ಕಾರ್ಯಾಗಾರವನ್ನು ಶೂನ್ಯ ಬಂಡವಾಳದ ನೈಸರ್ಗಿಕ ಕೃಷಿಗೆ ಹೆಸರಾದ ಮಹಾರಾಷ್ಟ್ರದ ಸುಭಾಷ್‌ ಪಾಳೇಕರ್‌ ನಡೆಸಿಕೊಡಲಿದ್ದಾರೆ. ಪುಷ್ಪಗಿರಿ ಮಠದ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ಅವರ ಸಹ
ಕಾರದಲ್ಲಿ ಕಾರ್ಯಾಗಾರ ನಡೆಯಲಿದೆ ಎಂದು ಸಂಘದ ಸಂಚಾಲಕಿ ಚುಕ್ಕಿ ನಂಜುಂಡಸ್ವಾಮಿ ತಿಳಿಸಿದ್ದಾರೆ.

ADVERTISEMENT

₹800 ಶುಲ್ಕ ಪಾವತಿಸಿ ರೈತರು ನೋಂದಣಿ ಮಾಡಿಸಿಕೊಳ್ಳಬಹುದು. ಶುಲ್ಕ ಪಾವತಿಸಲು ಕಷ್ಟವಿರುವ 100 ಸಣ್ಣ ರೈತರಿಗೆ ಉಚಿತವಾಗಿ ವ್ಯವಸ್ಥೆ ಮಾಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಸಂಪರ್ಕ: 76762 80136.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.