ADVERTISEMENT

ರಾಜೀನಾಮೆ ಪರ್ವದ ಮಧ್ಯೆಯೇ ರೇವಣ್ಣ ಸಭೆ | ₹1,500 ಕೋಟಿ ಬಾಕಿ ಬಿಲ್‌ ಚುಕ್ತಾ!

ಶಾಸಕರ ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 10 ಜುಲೈ 2019, 20:11 IST
Last Updated 10 ಜುಲೈ 2019, 20:11 IST
   

ಬೆಂಗಳೂರು: ಜೆಡಿಎಸ್‌–ಕಾಂಗ್ರೆಸ್‌ ಮೈತ್ರಿಕೂಟದ ಶಾಸಕರ ರಾಜೀನಾಮೆ ಹಾಗೂ ಪ್ರತಿಭಟನೆಯ ರಾದ್ಧಾಂತದ ನಡುವೆಯೇ ಲೋಕೋಪಯೋಗಿ ಇಲಾಖೆಯಲ್ಲಿ ₹1,500 ಕೋಟಿ ಬಾಕಿ ಬಿಲ್‌ಗಳನ್ನು ಗುತ್ತಿಗೆದಾರರಿಗೆ ಪಾವತಿಸಲಾಗಿದೆ.

ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ನೇತೃತ್ವದಲ್ಲಿ ನಗರದಲ್ಲಿ ರಹಸ್ಯ ಸ್ಥಳದಲ್ಲಿ ಬುಧವಾರ ನಡೆದ ಮುಖ್ಯ ಎಂಜಿನಿಯರ್‌ಗಳು, ಸೂಪರಿಂಟೆಂಡೆಂಟ್‌ ಎಂಜಿನಿಯರ್‌ಗಳು ಹಾಗೂ ಗುತ್ತಿಗೆದಾರರ ಸಭೆಯಲ್ಲಿ ಈ ಬಿಲ್‌ಗಳನ್ನು ಚುಕ್ತಾ ಮಾಡಲಾಯಿತು.

ಸಂಪರ್ಕ ಮತ್ತು ಕಟ್ಟಡ (ದಕ್ಷಿಣ) ₹400 ಕೋಟಿ, ಧಾರವಾಡ ವಲಯದ ₹400 ಕೋಟಿ, ಈಶಾನ್ಯ ವಲಯದ ₹300 ಕೋಟಿ, ರಾಷ್ಟ್ರೀಯ ಹೆದ್ದಾರಿ ವಿಭಾಗದ ₹100 ಕೋಟಿ, ಎಸ್‌ಎಸ್‌ಡಿಪಿಯ ₹100 ಕೋಟಿ, ಕೆಶಿಪ್‌ನ ₹100 ಕೋಟಿ, ಕೆಆರ್‌ಡಿಸಿಎಲ್‌ನ ₹100 ಕೋಟಿ ಬಿಲ್‌ಗಳನ್ನು ಬಿಡುಗಡೆ ಮಾಡಲಾಯಿತು. ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಕೈಗೊಂಡ ರಸ್ತೆ ಹಾಗೂ ಸೇತುವೆ ನಿರ್ಮಾಣದ ಕಾಮಗಾರಿಗಳ ಬಿಲ್ ಇದಾಗಿದೆ.

ADVERTISEMENT

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮ, ಕಾವೇರಿ ನೀರಾವರಿ ನಿಗಮ ಹಾಗೂ ಕರ್ನಾಟಕ ನೀರಾವರಿ ನಿಗಮಗಳ ನಿರ್ದೇಶಕರ ಮಂಡಳಿ ಸಭೆ ನಡೆದಿದ್ದು, ಈ ಸಭೆಯಲ್ಲಿ ₹5 ಸಾವಿರ ಕೋಟಿಗೂ ಅಧಿಕ ಮೊತ್ತದ ಕಾಮಗಾರಿಗಳಿಗೆ ಒಪ್ಪಿಗೆ ನೀಡಲಾಗಿದೆ ಎಂದು ಉನ್ನತ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.