ADVERTISEMENT

ಪ್ರಶ್ನೆಪತ್ರಿಕೆ ಸೋರಿಕೆ: ‘ಗುರೂಜಿ’ಗೆ ಜಾಮೀನು

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2019, 20:07 IST
Last Updated 18 ಫೆಬ್ರುವರಿ 2019, 20:07 IST

ಬೆಂಗಳೂರು: ಬಿಎಂಟಿಸಿ ಚಾಲಕ ಕಂ ನಿರ್ವಾಹಕ ಹಾಗೂ ಪೊಲೀಸ್‌ ಕಾನ್‌ಸ್ಟೆಬಲ್ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆಗಳ ಸೋರಿಕೆ ಪ್ರಕರಣದ ಆರೋಪಿ ಶಿವಕುಮಾರಯ್ಯ ಅಲಿಯಾಸ್ ಗುರೂಜಿಗೆ ಜಾಮೀನು ನೀಡಿ ನಗರದ 1ನೇ ಸಿಸಿಎಚ್ ನ್ಯಾಯಾಲಯ ಆದೇಶ ಹೊರಡಿಸಿದೆ. ಆರೋಪಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯ, ‘₹5 ಲಕ್ಷ ಮೌಲ್ಯದ ಬಾಂಡ್ ನೀಡಬೇಕು. ಇಬ್ಬರ ಶ್ಯೂರಿಟಿ ಒದಗಿಸಬೇಕು. ತನಿಖೆಗೆ ಸಹಕರಿಸಬೇಕು. ಸಾಕ್ಷ್ಯ ನಾಶ ಮಾಡಬಾರದು’ ಎಂಬ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿತು.

ಪ್ರಶ್ನೆಪತ್ರಿಕೆ ಸೋರಿಕೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಸಿಸಿಬಿ ಪೊಲೀಸರು, ರಾಜ್ಯದಾದ್ಯಂತ ಕಾರ್ಯಾಚರಣೆ ನಡೆಸಿ ನ. 24ರಂದು ಗುರೂಜಿಯನ್ನು ಆತನ ಸಹಚರರ ಸಮೇತ ಬಂಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT