ADVERTISEMENT

ರೋಗಿಗಳನ್ನು ವಾಪಸ್ ಕಳುಹಿಸಿದರೆ ಕ್ರಿಮಿನಲ್ ಮೊಕದ್ದಮೆ: ಆರ್.ಅಶೋಕ್ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 6 ಜುಲೈ 2020, 12:05 IST
Last Updated 6 ಜುಲೈ 2020, 12:05 IST
ಆರ್‌.ಅಶೋಕ್‌
ಆರ್‌.ಅಶೋಕ್‌   

ಬೆಂಗಳೂರು: ಕೊರೊನಾ ಹೊರತಾಗಿ ಬೇರೆ ಖಾಯಿಲೆ ಇರುವ ರೋಗಿಗಳನ್ನು ದಾಖಲಿಸಿಕೊಳ್ಳದೆ ವಾಪಸ್ ಕಳುಹಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ಎಲ್ಲಾ ಆಸ್ಪತ್ರೆಗಳಿಗೆ ಸುತ್ತೋಲೆ ಹೊರಡಿಸಲು ಬಿಬಿಎಂಪಿ ಆಯುಕ್ತರಿಗೆ ಅವರು ಸೂಚನೆ ನೀಡಿದ್ದಾರೆ. ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಿಸಿದರೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಆಗಲಿರುವ ಶಿಕ್ಷೆಯ ಬಗ್ಗೆಯೂಸುತ್ತೋಲೆಯಲ್ಲಿ ದಾಖಲಿಸುವಂತೆ ತಿಳಿಸಿದ್ದಾರೆ.

‘ಕೊರೊನಾ ಸೋಂಕಿತರು ನೇರವಾಗಿ ಆಸ್ಪತ್ರೆಗಳಿಗೆ ಹೋಗಬೇಕಿಲ್ಲ. ಸೋಂಕು ದೃಢಪಟ್ಟಿರುವ ಬಗ್ಗೆ ಮಾಹಿತಿ ನೀಡುವ ಬಿಬಿಎಂಪಿ ಸಿಬ್ಬಂದಿಯೇ ಆಂಬುಲೆನ್ಸ್ ತಂದು ಆಸ್ಪತ್ರೆಗೆ ಕರೆದೊಯ್ಯುತ್ತಾರೆ. ಅಲ್ಲಿಯ ತನಕ ಹೊರಗೆ ಬರದೆ ಮನೆಯಲ್ಲೇ ಇರಬೇಕು’ ಎಂದು ಆರ್. ಅಶೋಕ್ ಮನವಿ ಮಾಡಿದರು.

ADVERTISEMENT

‘ಸೊಂಕಿತರು ಆಸ್ಪತ್ರೆಗೆ ದಾಖಲಾಗುವ ಮುನ್ನ ಕರಾರು ಪತ್ರಕ್ಕೆ ಸಹಿ ಹಾಕಬೇಕು ಎಂಬ ನಿಯಮವನ್ನು ಜಾರಿಗೆ ತಂದಿಲ್ಲ. ಸಹಿ ಹಾಕಿಸಿಕೊಳ್ಳುತ್ತಿದ್ದರೆ ನಿಲ್ಲಿಸುವಂತೆ ಎಚ್ಚರಿಕೆ ನೀಡಲಾಗುವುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.