ADVERTISEMENT

ಹುಲಿಗೆ ರೇಡಿಯೊ ಕಾಲರ್‌: ಅರ್ಜಿ ವಿಲೇವಾರಿ

​ಪ್ರಜಾವಾಣಿ ವಾರ್ತೆ
Published 26 ಜುಲೈ 2022, 21:37 IST
Last Updated 26 ಜುಲೈ 2022, 21:37 IST
ಹುಲಿಗೆ ರೇಡಿಯೊ ಕಾಲರ್‌ ಅಳವಡಿಸಿರುವುದು
ಹುಲಿಗೆ ರೇಡಿಯೊ ಕಾಲರ್‌ ಅಳವಡಿಸಿರುವುದು   

ಬೆಂಗಳೂರು: ‘ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಹುಲಿಗೆ ರೇಡಿಯೊ ಕಾಲರ್ ಹಾಕಿರುವುದನ್ನು ಪ್ರಶ್ನಿಸಿರುವ ಪ್ರಕರಣದಲ್ಲಿ ಪರಿಗಣಿಸಬಹುದಾದ ಯಾವುದೇ ಅಂಶಗಳಿಲ್ಲ’ ಎಂಬ ಅಭಿಪ್ರಾಯದೊಂದಿಗೆ ಹೈಕೋರ್ಟ್ ಅರ್ಜಿ ವಿಲೇವಾರಿ ಮಾಡಿದೆ.

ಈ ಸಂಬಂಧ ಕೃಷಿಕ ಚೇರಂಡ ನಂದ ಸುಬ್ಬಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿ,‘ಅರ್ಜಿದಾರರು ವನ್ಯಜೀವಿ ಸಂರಕ್ಷಣಾ ಕಾಯ್ದೆ ಕಲಂ 28(1) (ಎ–ಡಿ) ನಿಯಮಗಳ ಸಿಂಧುತ್ವ ಪ್ರಶ್ನಿಸಿದ್ದಾರೆ. ಆದರೆ, ಇದಕ್ಕೆ ಯಾವುದೇ ಆಧಾರವಿಲ್ಲ. ಅಂತೆಯೇ, ಯಾವುದೇ ಮೂಲಭೂತ ಹಕ್ಕುಗಳೂ ಉಲ್ಲಂಘನೆಯಾಗಿಲ್ಲ. ಆದ್ದರಿಂದ, ಅರ್ಜಿ ವಿಲೇವಾರಿ ಮಾಡಲಾಗುತ್ತಿದೆ’ ಎಂದು ಹೇಳಿದೆ.

‘ಹುಲಿಗೆ ರೇಡಿಯೊ ಕಾಲರ್ ಅಳವಡಿಸಲು ಅನಧಿಕೃತವಾಗಿ ಅನುಮತಿ ನೀಡಲಾಗಿದ್ದು ಈ ಸಂಬಂಧ ಪಿಸಿಸಿಎಫ್ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಈ ಘಟನೆ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಬೇಕು’ ಎಂದು ಅರ್ಜಿದಾರರು ಮನವಿ ಮಾಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.