ಬಂಧನ (ಸಾಂದರ್ಭಿಕ ಚಿತ್ರ)
ಬೆಂಗಳೂರು: ವಾಕ್ ಮತ್ತು ಶ್ರವಣದೋಷವುಳ್ಳವರ ಕುರಿತು ಕೀಳಾಗಿ ಮಾತನಾಡಿದ್ದ ಆರೋಪದಡಿ ರೇಡಿಯೊ ಜಾಕಿ ಸೇರಿದಂತೆ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ರೋಹನ್ ಕಾರ್ಯಪ್ಪ ಮತ್ತು ಶರವಣ ಭಟ್ಟಾಚಾರ್ಯ ಬಂಧಿತರು.
ರೋಹನ್ ಕಾರ್ಯಪ್ಪ ಅವರು ಎಫ್‌ಎಂ ರೇಡಿಯೊದಲ್ಲಿ ಜಾಕಿಯಾಗಿ ಕೆಲಸ ಮಾಡುತ್ತಿದ್ದರೆ, ಶರವಣ ಅವರು ಮನೆಯಲ್ಲೇ ಇದ್ದರು. ಯುವ ರಾಜಕಾರಣಿಗಳನ್ನು ಅಣಕಿಸುವ ಭರದಲ್ಲಿ ವಾಕ್ ಮತ್ತು ಶ್ರವಣದೋಷವುಳ್ಳವರ ಕುರಿತು ಅವಹೇಳನಕಾರಿಯಾಗಿ ರೀಲ್ಸ್ ಮಾಡಿದ್ದರು ಎನ್ನಲಾಗಿದೆ.
ರೋಹನ್ ಅವರು ಹಿಂದಿ ಭಾಷೆಯಲ್ಲಿ ರಾಜಕೀಯದ ಕುರಿತು ಮಾತನಾಡಿದ್ದರೆ, ಶರವಣ ಅದನ್ನು ಸನ್ನೆಯಲ್ಲಿ ಮಾಡಿ ಅವಹೇಳನ ಆಗುವಂತೆ ತೋರಿಸಿದ್ದರು ಎಂಬ ಆರೋಪವಿದೆ. ಆ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರು. ಈ ವಿಡಿಯೊಗೆ ಆಕ್ಷೇಪ ವ್ಯಕ್ತವಾದ ಮೇಲೆ ಡಿಲೀಟ್ ಮಾಡಿ ಕ್ಷಮೆ ಕೋರಿದ್ದರು ಎಂದು ಮೂಲಗಳು ತಿಳಿಸಿವೆ.
ಆರೋಪಿಗಳನ್ನು ಬಂಧಿಸುವಂತೆ ವ್ಯಕ್ತಿಯೊಬ್ಬರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ದೂರು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.