ADVERTISEMENT

ಮಹಿಳಾ ಸಾಂತ್ವನ ಕೇಂದ್ರಕ್ಕೆ ನಟಿ ರಾಗಿಣಿ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2020, 5:51 IST
Last Updated 5 ಸೆಪ್ಟೆಂಬರ್ 2020, 5:51 IST
ನಟಿ ರಾಗಿಣಿ ದ್ವಿವೇದಿ
ನಟಿ ರಾಗಿಣಿ ದ್ವಿವೇದಿ   

ಬೆಂಗಳೂರು: ಡ್ರಗ್ ಜಾಲದಲ್ಲಿ ಭಾಗಿಯಾಗಿದ್ದ ಆರೋಪದಡಿ ಬಂಧಿಸಲಾಗಿರುವ ನಟಿ ರಾಗಿಣಿ ದ್ವಿವೇದಿ ಅವರನ್ನು ಸಿದ್ದಾಪುರದಲ್ಲಿರುವ ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ.

ಸಿಸಿಬಿ ಪೊಲೀಸ್ ಕಸ್ಟಡಿಗೆ ಪಡೆದಿರುವ ರಾಗಿಣಿ ಅವರನ್ನು ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಹಾಗೂ ಕೊರೊನಾ ಪರೀಕ್ಷೆಗೆ ಶುಕ್ರವಾರ ಸಂಜೆ ಒಳಪಡಿಸಲಾಗಿತ್ತು. ಅವರು ಮಹಿಳೆ ಎಂಬ ಕಾರಣಕ್ಕೆ ರಾತ್ರಿ ಉಳಿದುಕೊಳ್ಳಲು ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ.
ಶನಿವಾರ ಬೆಳಿಗ್ಗೆ ಪುನಃ ಅವರನ್ನು ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.