ADVERTISEMENT

ದ್ರಾವಿಡ್ ಹೆಸರು ಕೈಬಿಟ್ಟಿರುವ ಬಗ್ಗೆ ಇಸಿಐಗೆ ವರದಿ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2019, 20:16 IST
Last Updated 15 ಏಪ್ರಿಲ್ 2019, 20:16 IST
ರಾಹುಲ್‌ ಡ್ರಾವಿಡ್
ರಾಹುಲ್‌ ಡ್ರಾವಿಡ್   

ಬೆಂಗಳೂರು: ಚುನಾವಣಾ ಆಯೋಗದ ರಾಯಭಾರಿಯೂ ಆಗಿರುವ ಕ್ರಿಕೆಟಿಗ ರಾಹುಲ್ ದ್ರಾವಿಡ್ ಹೆಸರು ಮತದಾರರ ಪಟ್ಟಿಯಲ್ಲಿ ಇಲ್ಲದಿರುವ ಬಗ್ಗೆ ಕೇಂದ್ರ ಚುನಾವಣಾ ಆಯೋಗಕ್ಕೆ(ಇಸಿಐ) ವರದಿ ಕಳುಹಿಸಲಾಗಿದೆ.

ಈಗ ಹೆಸರು ಸೇರಿಸಲು ಸಾಧ್ಯವೋ ಇಲ್ಲವೋ ಎಂಬುದನ್ನು ಆಯೋಗ ತೀರ್ಮಾನಿಸಲಿದೆ’ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ಕುಮಾರ್ ಹೇಳಿದರು.

ಈ ನಡುವೆ ಬಿಬಿಎಂಪಿ ಅಧಿಕಾರಿಗಳು ದ್ರಾವಿಡ್ ಅವರ ಮನೆಗೆ ಸೋಮವಾರ ತೆರಳಿ ಮತದಾರರ ಪಟ್ಟಿಯಲ್ಲಿ ಅವರ ಹೆಸರಿಲ್ಲದಿರುವುದಕ್ಕೆ ಕಾರಣ ಏನು ಎಂಬುದರ ಬಗ್ಗೆ ಮಾಹಿತಿ ಕಲೆಹಾಕಿ ಆಯೋಗಕ್ಕೆ ಸಲ್ಲಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.