ADVERTISEMENT

ರೈತರ ಹೋರಾಟ ಬೆಂಬಲಿಸಿ ನಾಳೆ ‘ರೈಲು ತಡೆ ಚಳವಳಿ’

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2021, 21:09 IST
Last Updated 16 ಫೆಬ್ರುವರಿ 2021, 21:09 IST

ಬೆಂಗಳೂರು: ‘ದೆಹಲಿ ರೈತರ ಹೋರಾಟ ಬೆಂಬಲಿಸಿ ಫೆ.18ರಂದು ರಾಜ್ಯದಾದ್ಯಂತ ಮೂರು ಗಂಟೆಗಳ ರೈಲು ತಡೆ ಚಳವಳಿ ನಡೆಸಲಾಗುವುದು’ ಎಂದುರಾಜ್ಯ ಕಬ್ಬು ಬೆಳೆಗಾರರ ಸಂಘ ಹಾಗೂ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಸುತ್ತಿರುವ ದೆಹಲಿ ರೈತರ ಚಳವಳಿ ಹತ್ತಿಕ್ಕಲು ಪ್ರಯತ್ನಿಸಲಾಗುತ್ತಿದೆ. ಇದನ್ನು ಖಂಡಿಸಿ, ದೇಶದಾದ್ಯಂತ ಇದೇ 18ರಂದು ಮಧ್ಯಾಹ್ನ 12ರಿಂದ 3 ಗಂಟೆಯವರೆಗೆ ತನಕ ರೈಲು ತಡೆ ಚಳವಳಿ ನಡೆಸಲು ತೀರ್ಮಾನಿಸಲಾಗಿದ್ದು, ರಾಜ್ಯದಲ್ಲೂ ರೈಲು ತಡೆ ಇರಲಿದೆ’ ಎಂದರು.

‘ರಾಜ್ಯದಲ್ಲಿ ಆರು ತಿಂಗಳಿಗೊಮ್ಮೆ ಸಕ್ಕರೆ ಸಚಿವರು, ಆಯುಕ್ತರು ಬದಲಾಗುತ್ತಿದ್ದಾರೆ. ಇದರಿಂದ ಕಬ್ಬು ಬೆಳೆಗಾರರ ಸಮಸ್ಯೆಗಳು ಹೆಚ್ಚುತ್ತಿದ್ದು, ಅವುಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತಿಲ್ಲ. ಕಬ್ಬು ಬೆಳೆಗಾರರಿಗೆ ₹4 ಸಾವಿರ ಕೋಟಿ ಬಾಕಿಹಣ ಬರಬೇಕಾಗಿದೆ. ಈ ಬಗ್ಗೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.