ADVERTISEMENT

‘ರೈಲು ನಿಲ್ದಾಣದಲ್ಲಿ ಸಿಸಿಟಿವಿ ಕ್ಯಾಮೆರಾ ಏಕಿಲ್ಲ?’

​ಪ್ರಜಾವಾಣಿ ವಾರ್ತೆ
Published 19 ಜೂನ್ 2019, 20:21 IST
Last Updated 19 ಜೂನ್ 2019, 20:21 IST

ಬೆಂಗಳೂರು: ರೈಲು ನಿಲ್ದಾಣಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಕೊರತೆ ಬಗ್ಗೆ ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದ ಅಧಿಕಾರಿಗಳನ್ನು ರೈಲ್ವೆ ಮಂಡಳಿ ಪ್ರಶ್ನೆ ಮಾಡಿತು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಮತ್ತು ಕಂಟೋನ್ಮೆಂಟ್ ರೈಲು ನಿಲ್ದಾಣಕ್ಕೆ ಮೂವರು ಸದಸ್ಯರೊಂದಿಗೆ ಬುಧವಾರ ಭೇಟಿ ನೀಡಿದ್ದ ರೈಲ್ವೆ ಮಂಡಳಿಯ ಪ್ರಯಾಣಿಕರ ಸೇವಾ ಸಮಿತಿ ಅಧ್ಯಕ್ಷ ರಮೇಶ್ ಚಂದ್ರರತ್ನ ಪರಿಶೀಲನೆ ನಡೆಸಿದರು.

‘ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಸಿಸಿಟಿವಿ ಕ್ಯಾಮೆರಾಗಳು ಎಲ್ಲೆಡೆ ಇರಬೇಕು. ಆದರೆ,ಕಂಟೋನ್ಮೆಂಟ್ ರೈಲು ನಿಲ್ದಾಣದ ಕೆಲವೆಡೆ ಇಲ್ಲ ಏಕೆ’ ಎಂದು ಪ್ರಶ್ನಿಸಿದರು. ‘ಸಮಸ್ಯೆಯನ್ನು ಕೂಡಲೇ ಸರಿಪಡಿಸಿ’ ಎಂದು ರೈಲ್ವೆ ವಿಭಾಗೀಯ ವ್ಯವಸ್ಥಾಪಕರಿಗೆ ಸೂಚನೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.