ADVERTISEMENT

ರೈಲ್ವೆ ಇಲಾಖೆಯಲ್ಲಿ ಕೆಲಸದ ಆಮಿಷವೊಡ್ಡಿ ವಂಚನೆ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2020, 3:01 IST
Last Updated 11 ಸೆಪ್ಟೆಂಬರ್ 2020, 3:01 IST

ಬೆಂಗಳೂರು: ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ₹ 3 ಲಕ್ಷ ಪಡೆದು ವಂಚಿಸಲಾಗಿದ್ದು, ಈ ಸಂಬಂಧ ಬೆಂಗಳೂರು ನಗರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ವಂಚನೆಗೀಡಾಗಿರುವ ಪ್ರವೀಣ್‌ಕುಮಾರ್ ಎಂಬುವರು ದೂರು ನೀಡಿದ್ದಾರೆ. ಆರೋಪಿಗಳಾದ ರೈಲ್ವೆ ಇಲಾಖೆ ಉದ್ಯೋಗಿ ಚಮನ್‌ಸಿಂಗ್ ಹಾಗೂ ನಿವೃತ್ತ ಸರ್ಕಾರಿ ನೌಕರ ತಿಮ್ಮಯ್ಯ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ. ಅವರಿಬ್ಬರು ತಲೆಮರೆಸಿಕೊಂಡಿದ್ದಾರೆ’ ಎಂದು ಪೊಲೀಸರು ಹೇಳಿದರು.

‘ಖಾಸಗಿ ಕಂಪನಿ ಉದ್ಯೋಗಿ ಪ್ರವೀಣ್ ಅವರಿಗೆ ಮೂರು ವರ್ಷಗಳ ಹಿಂದೆ ಆರೋಪಿಗಳ ಪರಿಚಯವಾಗಿತ್ತು. ರೈಲ್ವೆ ಇಲಾಖೆಯ ಸಿ ಗ್ರೂಪ್ ನೌಕರ ಹುದ್ದೆ ಕೊಡಿಸುವುದಾಗಿ ಹೇಳಿದ್ದ ಆರೋಪಿಗಳು, ₹ 8 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ₹ 3 ಲಕ್ಷವನ್ನು ಮುಂಗಡವಾಗಿ ಪಡೆದಿದ್ದರು. ಇದಾದ ನಂತರ ಆರೋಪಿಗಳು, ಕೆಲಸ ಕೊಡಿಸಿಲ್ಲ. ಹಣವನ್ನೂ ವಾಪಸು ಕೊಟ್ಟಿಲ್ಲ’ ಎಂದೂ ಮಾಹಿತಿ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.