
ಪ್ರಜಾವಾಣಿ ವಾರ್ತೆ
ಸಾವು–ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಯಲಹಂಕ ಬಳಿ ಹಾದು ಹೋಗಿರುವ ರೈಲು ಹಳಿ ಸಮೀಪದಲ್ಲಿ ಯುವಕರೊಬ್ಬರ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿವೆ.
‘ಕೊಂಡಪ್ಪ ಲೇಔಟ್‌ನ ಸಾಗರ್ (33) ಮೃತರು. ಹಳಿಗೆ ಹೊಂದಿಕೊಂಡಿರುವ ಜಾಗದಲ್ಲಿ ಮೃತದೇಹ ಕಂಡಿದ್ದ ರೈಲ್ವೆ ಸಿಬ್ಬಂದಿ ಠಾಣೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಹೋಗಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ’ ಎಂದು ಯಶವಂತಪುರ ರೈಲ್ವೆ ಪೊಲೀಸ್ ಮೂಲಗಳು ಹೇಳಿವೆ.
‘ಸಾಗರ್ ಅವರು ಮಾನಸಿಕ ಅಸ್ವಸ್ಥರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದು ಕೊಲೆಯೋ, ಆತ್ಮಹತ್ಯೆಯೋ ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ. ಪ್ರಕರಣ ದಾಖಲಿಸಿಕೊಂಡು ಎಲ್ಲ ಆಯಾಮದಲ್ಲಿ ತನಿಖೆ ನಡೆಸಲಾಗುತ್ತಿದೆ’ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.