ADVERTISEMENT

ಗುರುವಾರ, ಶುಕ್ರವಾರ ರಾಜ್ಯದ ವಿವಿಧೆಡೆ ಭಾರಿ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2024, 15:50 IST
Last Updated 10 ಡಿಸೆಂಬರ್ 2024, 15:50 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಗುರುವಾರ ಹಾಗೂ ಶುಕ್ರವಾರ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಚಿತ್ರದುರ್ಗ, ತುಮಕೂರು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ಗುರುವಾರ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ. ಬಳ್ಳಾರಿ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ ಹಾಗೂ ವಿಜಯನಗರ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. 

ADVERTISEMENT

ಶುಕ್ರವಾರವು ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಶಿವಮೊಗ್ಗ, ಉಡು‍ಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಹಾಗೂ ತುಮಕೂರು ಜಿಲ್ಲೆಗಳಿಗೆ ಇಲಾಖೆಯು ‘ಯೆಲ್ಲೊ ಅಲರ್ಟ್’ ಘೋಷಿಸಿದೆ. ಇದರಿಂದಾಗಿ ಈ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ.

ಶನಿವಾರವೂ ರಾಜ್ಯದ ವಿವಿಧೆಡೆ ಮಳೆ ಮುಂದುವರಿಯುವ ಸಂಭವವಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.