ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರದ ವಾತಾವರಣವು ಥಂಡಿಯಿಂದ ಕೂಡಿತ್ತು. ವಿವಿಧ ಬಡಾವಣೆಗಳಲ್ಲಿ ತುಂತುರು ಮಳೆ ಸುರಿಯಿತು. ಜೊತೆಗೆ ಜೋರಾದ ಗಾಳಿಯೂ ಬೀಸುತ್ತಿತ್ತು.
ಬೆಂಗಳೂರಿನಲ್ಲಿ ಶನಿವಾರವೂ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ. ಕೆಲವು ಭಾಗದಲ್ಲಿ ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶುಕ್ರವಾರ ಉಷ್ಣಾಂಶ ಗರಿಷ್ಠ 22 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಶನಿವಾರ ಗರಿಷ್ಠ 25 ಹಾಗೂ ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದೆ ಎಂದು ಇಲಾಖೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.